ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ' (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ - ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.