ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಪತ್ನಿಗೆ ನೀಡಿರುವ MUDA ನಿವೇಶನ ವಾಪಸ್ ಪಡೆಯಲು TJ ಅಬ್ರಹಾಂ ಮನವಿ

Published 5 ಆಗಸ್ಟ್ 2024, 7:24 IST
Last Updated 5 ಆಗಸ್ಟ್ 2024, 7:24 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

' ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464 ರಲ್ಲಿ 2001ರಲ್ಲಿಯೇ ಮುಡಾ ನಿವೇಶನಗಳನ್ನು ರಚಿಸಿ, ನಂತರದಲ್ಲಿ ಫಲಾನುಭವಿಗಳಿಗೆ ಹಂಚಿದೆ. 2004ರಲ್ಲಿ ಸಿದ್ದರಾಮಯ್ಯ ಭಾಮೈದ ಇದನ್ನು ಖರೀದಿ ಮಾಡಿದ್ದಾರೆ. ಈ ಖರೀದಿಯೇ ಅಕ್ರಮ ಆಗಿರುವುದರಿಂದ ಅವರಿಗೆ ನಿವೇಶನ ನೀಡಲು ಬರುವುದಿಲ್ಲ. ಹೀಗಾಗಿ ಹಂಚಿಕೆ ಆಗಿರುವ ನಿವೇಶನಗಳನ್ನು ವಾಪಸ್ ಪಡೆಯಬೇಕು' ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅಬ್ರಹಾಂ ' ಯಡಿಯೂರಪ್ಪ ಮೇಲೆ ಆರೋಪ ಮಾಡಿದ್ದಾಗ ಇದೇ ಸಿದ್ದರಾಮಯ್ಯ ನನ್ನ ಬೆನ್ನು ತಟ್ಟಿದ್ದರು. ಈಗ ಬ್ಲಾಕ್ ಮೇಲರ್ ಆದೆನೇ' ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT