ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಹ್ವಾನ

Published 18 ಮೇ 2023, 11:15 IST
Last Updated 18 ಮೇ 2023, 11:15 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಈ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು (ಗುರುವಾರ) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಮೇ 20 ಶನಿವಾರದಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಹೊರತಾಗಿ ಸಮಾನ ಮನಸ್ಕ ರಾಜಕೀಯ ಪಕ್ಷಗಳ ಪ್ರಮುಖ ನಾಯಕರನ್ನು ಆಹ್ವಾನಿಸಲಾಗುವುದು ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ, ದೂರವಾಣಿ ಕರೆ ಮೂಲಕ ಸ್ಟಾಲಿನ್‌ ಅವ‌ರನ್ನು ಆಹ್ವಾನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆದ ಚುನಾವಣೆಯಲ್ಲಿ 135 ಸ್ಥಾನಗಳನ್ನು ಜಯಿಸುವ ಮೂಲಕ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT