ಬೆಂಗಳೂರು: ಜಾತಿಗೊಂದು ನಿಗಮ ಸ್ಥಾಪನೆಯ ಹಿಂದೆ ಅಸಮಾನತೆ ನಿರ್ಮೂಲನೆಯ ಉದ್ದೇಶ ಇದೆ ಎಂಬ ಸಮರ್ಥನೆಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ.

ಜಾತಿಗೊಂದು ನಿಗಮ ಮತ್ತು ಮಂಡಳಿ ಸ್ಥಾಪಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.

‘ಲಿಂಗಾಯತ, ಮರಾಠಾ, ಬ್ರಾಹ್ಮಣ, ಆರ್ಯವೈಶ್ಯ ಅಭಿವೃದ್ಧಿ ನಿಗಮಗಳ ಸ್ಥಾಪನೆ ಪ್ರಶ್ನಿಸಿರುವ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಿರುವ ಸರ್ಕಾರ, ಸಂವಿಧಾನದ 162ನೇ ಪರಿಚ್ಛೇದದ ಅಡಿಯಲ್ಲಿ ಸಾಂವಿಧಾನಿಕ ಅಧಿಕಾರ ಚಲಾಯಿಸಲಾಗಿದೆ’ ಎಂದು ಆಕ್ಷೇಪಣೆಯಲ್ಲಿ ತಿಳಿಸಿದೆ.

ದುರ್ಬಲ ವರ್ಗದವರ ಸಾಮಾಜಿಕ ಸ್ಥಾನಮಾನ, ಶಿಕ್ಷಣ ಮಟ್ಟ, ಸಾಂಸ್ಕೃತಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ ಗಮನದಲ್ಲಿ ಇಟ್ಟುಕೊಂಡು ನಿಗಮಗಳನ್ನು ಸ್ಥಾಪಿಸಲಾಗಿದೆ ಎಂದು ವಿವರಿಸಿದೆ.

‘ಬರಲಿರುವ ಉಪಚುನಾವಣೆ ಗಮನದಲ್ಲಿ ಇಟ್ಟುಕೊಂಡು ಈ ನಿಗಮಗಳನ್ನು ಸ್ಥಾಪಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಆದರೆ, ಚುನಾವಣೆ ಘೋಷಣೆಗೂ ಮೊದಲೇ ನಿಗಮ ಮಂಡಳಿಗಳು ಅಸ್ತಿತ್ವದಲ್ಲಿವೆ. ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮಗಳನ್ನು ಕಳೆದ 15 ವರ್ಷಗಳಲ್ಲಿ ಸ್ಥಾಪಿಸಲಾಗಿದೆ’ ಎಂದು ಆಕ್ಷೇಪಣೆಯಲ್ಲಿ ಎಂದು ಸರ್ಕಾರ ತಿಳಿಸಿದೆ.

‘ಬ್ರಾಹ್ಮಣ, ಮಾರಾಠಾ, ವೀರಶೈವ ಲಿಂಗಾಯತ, ಆರ್ಯವೈಶ್ಯ, ವಿಶ್ವಕರ್ಮ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಂದಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಅಂತವರಿಗೆ ಸಹಾಯ ಹಸ್ತ ಚಾಚುವುದು ಸರ್ಕಾರ ಕರ್ತವ್ಯ’ ಎಂದು ಆಕ್ಷೇಪಣೆಯಲ್ಲಿ ವಿವರಿಸಿದೆ. ವಿಚಾರಣೆಯನ್ನು ಪೀಠ ಮಾ.31ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.