ನವದೆಹಲಿ: ಕರ್ನಾಟಕದಲ್ಲಿ ಸೋಮವಾರದಿಂದಲೇ ತಂಬಾಕು ಖರೀದಿ ಮಾಡುವುದಾಗಿ ರಾಜ್ಯದ ನಿಯೋಗಕ್ಕೆ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರ ಜತೆ ಶುಕ್ರವಾರ ಮಾತುಕತೆ ನಡೆಸಿದರು.

‘ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರರ ಬೇಡಿಕೆಗಳಿಗೆ ಸಚಿವರು ಸ್ಪಂದಿಸಿದರು. ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿದರು’ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ನಿಯೋಗದಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಮೈಸೂರು -ಕೊಡಗು ಸಂಸದ ಯದುವೀರ್ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್. ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಕೋಲಾರ ಸಂಸದ ಮಲ್ಲೇಶ್ ಬಾಬು ಇದ್ದರು.

ಸಭೆ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಸಾ.ರಾ.ಮಹೇಶ್, ‘ಸೋಮವಾರದಿಂದ ತಂಬಾಕು ಖರೀದಿಗೆ ಸಚಿವ ಗೋಯಲ್ ಸೂಚನೆ ನೀಡಿದ್ದಾರೆ’ ಎಂದು ಹೇಳಿದರು.

‘ಅಲ್ಲದೆ, 190 ದೇಶಗಳ ರಾಯಭಾರಿಗಳಿಗೆ ಪತ್ರ ಬರೆದು ಮುಕ್ತ ಮಾರುಕಟ್ಟೆಯಲ್ಲಿ ತಂಬಾಕು ಖರೀದಿಗೆ ಕೋರಿಕೆ ಸಲ್ಲಿಸಲಾಗುವುದು. ಅಲ್ಲದೆ, ಈವರೆಗೆ ರಪ್ತು ಮಾಡದಿರುವ ದೇಶಗಳಿಗೂ ತಂಬಾಕು ರಪ್ತು ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವರು ಭರವಸೆ ನೀಡಿದ್ದಾರೆ’ ಎಂದರು. ತಂಬಾಕಿಗೆ ಬೆಂಬಲ ಬೆಲೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.

‘ಖರೀದಿ ನಿಲ್ಲಿಸಿರುವ ಪರಿಣಾಮದಿಂದ ತಂಬಾಕು ಬೆಲೆಯಲ್ಲಿ ಕುಸಿತ ಆಗಿದೆ. ಕೆ.ಜಿ.ಗೆ ₹320ರಿಂದ ₹250 ವರೆಗೂ ಕುಸಿತ ಕಂಡಿದೆ. ಹೀಗಾಗಿ, ಗೋಯಲ್ ಅವರನ್ನು ಭೇಟಿಯಾಗಿ ಬೆಲೆ ಹೆಚ್ಚಿಸುವ ಮತ್ತು ಪರಿಹಾರ ನೀಡುವ ಬಗ್ಗೆ ಮನವಿ ಮಾಡಲಾಗಿದೆ. ಸೂಕ್ತವಾದ ಮಾರುಕಟ್ಟೆ ವ್ಯವಸ್ಥೆ ನೀಡಲು ಕೇಳಿದ್ದೇವೆ’ ಎಂದರು.

ಶಾಸಕ ಎ. ಮಂಜು ಮಾತನಾಡಿ, ‘ಕರ್ನಾಟಕದಲ್ಲಿ 100 ದಶಲಕ್ಷ ಟನ್ ತಂಬಾಕು ಬೆಳೆಯಲು ತಂಬಾಕು ಮಂಡಳಿ ಅವಕಾಶ ನೀಡಿದೆ. ಈ ವರ್ಷ 80 ದಶಲಕ್ಷ ಟನ್ ತಂಬಾಕು ಬೆಳೆಯಲಾಗಿದೆ. ನಾವು ಬೆಳೆದ ಸೊಪ್ಪನ್ನು ಸರ್ಕಾರ ನಿರ್ಧಾರ ಮಾಡಿದ ಬೆಲೆಯಲ್ಲಿ ಖರೀದಿ ಮಾಡಬೇಕಿದೆ. ಈ ಹಿಂದೆ ಖರೀದಿ ಭರವಸೆ ನೀಡಿದ ಕಂಪನಿಗಳು ಖರೀದಿ ಮಾಡಿಲ್ಲ. ಈಗ ಬೆಳೆದ ಸೊಪ್ಪನ್ನು ಕೂಡಲೇ ಖರೀದಿ ಮಾಡಬೇಕು. ಕೇಂದ್ರ ಸರ್ಕಾರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.