ಬೆಂಗಳೂರು: ‘ಕರ್ನಾಟಕ-ಗೋವಾ ಗಡಿ ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ-748ರ (ಹಳೆಯ ಎನ್ಎಚ್–4ಎ) ಖಾನಾಪುರ ತಾಲ್ಲೂಕಿನ ಗಣೇಬೈಲ್ ಟೋಲ್ ಪ್ಲಾಜಾದಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಖಾನಾಪುರ ತಾಲ್ಲೂಕಿನ ವಡ್ಡೆಬೈಲು ಗ್ರಾಮದ ಕೃಷ್ಣಾಜಿ ಪಾಟೀಲ್, ದಿನಕರ ಪರಶುರಾಮ ಮರಗಳೆ, ಕೃಷ್ಣ ಮಲ್ಲಪ್ಪ ಕುಂಬಾರ ಮತ್ತು ವಿವೇಕ ರಾಮಚಂದ್ರ ಗಿರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನದ ಧಾರವಾಡ ವಿಭಾಗದ ಯೋಜನಾ ನಿರ್ದೇಶಕ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?:

‘ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಖಾನಾಪುರ-ಬೆಳಗಾವಿ ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈ ಭಾಗದಲ್ಲಿನ ಹಲಗಾ ಬಸ್ತವಾಡ ಗ್ರಾಮದ ರೈತರ ಪ್ರತಿಭಟನೆಯಿಂದಾಗಿ ಕಾಮಗಾರಿ ಕಳೆದ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದೆ. ಆದರೂ, ಗಣೇಬೈಲ್ ಟೋಲ್ ನಾಕಾದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಹೆದ್ದಾರಿ ಸಚಿವಾಲಯ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಜರುಗಿಲ್ಲ. ಆದ್ದರಿಂದ, ಗಣೇಬೈಲ್ ಟೋಲ್ ನಾಕಾದಲ್ಲಿ ಟೋಲ್ ಸಂಗ್ರಹ ಮಾಡದಂತೆ ಕೇಂದ್ರ ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.