ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Top 10 News: ಈ ದಿನದ ಪ್ರಮುಖ ಸುದ್ದಿಗಳು– ಆಗಸ್ಟ್‌ 01, 2023

Published 1 ಆಗಸ್ಟ್ 2023, 11:52 IST
Last Updated 1 ಆಗಸ್ಟ್ 2023, 11:52 IST
ಅಕ್ಷರ ಗಾತ್ರ
Introduction

ರಾಜ್ಯ, ದೇಶ, ವಿದೇಶ, ಬೆಂಗಳೂರು ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.

1

ಲೋಕಸಭೆ ಚುನಾವಣೆ ತಂತ್ರಗಾರಿಕೆಗೆ ದೆಹಲಿಗೆ ಹೋಗುತ್ತಿದ್ದೇವೆ: ಡಿ.ಕೆ. ಶಿವಕುಮಾರ್

ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

‘ಮುಂಬರುವ ಲೋಕಸಭೆ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಸಚಿವರು, ಶಾಸಕರು ಮತ್ತು ಇತರ ನಾಯಕರು ದೆಹಲಿ ಪ್ರವಾಸ ಮಾಡುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

2

ಹರಿಯಾಣದಲ್ಲಿ ಗುಂಪು ಘರ್ಷಣೆ: ಮೃತರ ಸಂಖ್ಯೆ 5ಕ್ಕೆ ಏರಿಕೆ; ಪರಿಸ್ಥಿತಿ ಶಾಂತ

ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ-

ಹರಿಯಾಣದ ನೂಹ್‌ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡು‌ವಿನ ಘರ್ಷಣೆಯಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

3

ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ: ಖರ್ಗೆ

 ಮಲ್ಲಿಕಾರ್ಜುನ ಖರ್ಗೆ
 ಮಲ್ಲಿಕಾರ್ಜುನ ಖರ್ಗೆ

ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗದಿದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.

4

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿಯಲ್ಲಿ ತೊಡಗಿದರೆ ಗಡಿಪಾರು: ದಿನೇಶ್‌ ಗುಂಡೂರಾವ್‌

ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌

‘ಸಂಘ ಪರಿವಾರದ ಸಂಘಟನೆಗಳೂ ಸೇರಿದಂತೆ ವಿವಿಧ ಕೋಮುವಾದಿ ಶಕ್ತಿಗಳು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರುವ ಕೆಲಸವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

5

ಬೆಲೆ ಏರಿಕೆ ಆರನೇ ಗ್ಯಾರಂಟಿ: ಬಸವರಾಜ ಬೊಮ್ಮಾಯಿ ಟೀಕೆ

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ ಸರ್ಕಾರದ ಆರನೇ ಗ್ಯಾರಂಟಿ ಎಲ್ಲ ವಸ್ತುಗಳ ಬೆಲೆಗಳ ಏರಿಕೆಯ ಗ್ಯಾರಂಟಿ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.

6

ತಿರುಪತಿ ಲಡ್ಡುಗೆ ನಂದಿನಿ ತುಪ್ಪ: KMF ಅಧ್ಯಕ್ಷರ ಹೇಳಿಕೆ ಸರಿಯಲ್ಲ ಎಂದ ಟಿಟಿಡಿ

ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಮಾಡಲು ಅನುಮತಿ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಹೇಳಿರುವ ಮಾತು ಸತ್ಯಕ್ಕೆ ದೂರವಾಗಿದ್ದು ಎಂದು ಟಿಟಿಡಿಯ ಧರ್ಮರೆಡ್ಡಿ ಹೇಳಿದ್ದಾರೆ.

7

ನಾಡಿದ್ದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿ ಭೇಟಿ

File Photo
File Photo

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೆ ಸಲ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

8

ದಶಕಗಳಿಂದ ಕೇವಲ ಹಸಿ ತರಕಾರಿ, ಹಣ್ಣುಗಳನ್ನು ಸೇವಿಸುತ್ತಿದ್ದ ಯುವತಿ ಸಾವು

ಝನ್ನಾ ಸ್ಯಾಮ್ಸೊನೋವಾ
ಝನ್ನಾ ಸ್ಯಾಮ್ಸೊನೋವಾ

ಹಸಿ ತರಕಾರಿ, ಹಣ್ಣುಗಳನ್ನು ತಿಂದು ಬದುಕುತ್ತಿದ್ದ ರಷ್ಯಾದ ಯುವತಿಯೊಬ್ಬಳು ಹಸಿವಿನಿಂದ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ

9

ವರ್ಗಾವಣೆ ವಿಚಾರ ಬೀದಿಯಲ್ಲಿ ಕುಳಿತು ಮಾತನಾಡುವುದಕ್ಕೆ ಸಾಧ್ಯವೇ?– ಸಚಿವ ಪರಮೇಶ್ವರ

‘ವರ್ಗಾವಣೆ ವಿಚಾರವಾಗಿ ಮುಖ್ಯಮಂತ್ರಿ ಜೊತೆ ರಹಸ್ಯವಾಗಿಯೇ ಮಾತನಾಡಿದ್ದೇನೆ. ವರ್ಗಾವಣೆ ವಿಚಾರವನ್ನು ಬೀದಿಯಲ್ಲಿ ಕುಳಿತು ಮಾತನಾಡುವುದಕ್ಕೆ ಸಾಧ್ಯವೇ? ಹಿಂದೆಯೂ ಮಾತನಾಡಿದ್ದೇವೆ. ಮುಂದೆಯೂ ರಹಸ್ಯವಾಗಿಯೇ ಮಾತನಾಡುತ್ತೇವೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

10

ಭಾರತ ಸೋತಾಗ ಇಂತಹ ಪ್ರತಿಕ್ರಿಯೆ ಸಾಮಾನ್ಯ: ಜಡೇಜ

ರವೀಂದ್ರ ಜಡೇಜ
ರವೀಂದ್ರ ಜಡೇಜ

ಭಾರತ ಕ್ರಿಕೆಟ್‌ ತಂಡದ ಆಟಗಾರರ ಬಗ್ಗೆ ಮಾಜಿ ನಾಯಕ ಕಪಿಲ್‌ ದೇವ್‌ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿರುವ ಆಲ್‌ರೌಂಡರ್‌ ರವೀಂದ್ರ ಜಡೇಜ, ‘ಭಾರತ ತಂಡ ಸೋತಾಗ ಈ ರೀತಿಯ ಪ್ರತಿಕ್ರಿಯೆಗಳು ಬರುವುದು ಸಾಮಾನ್ಯ’ ಎಂದಿದ್ದಾರೆ.