ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಭುತ ನಾಯಕ ಮತ್ತು ಉತ್ತಮ ಸ್ನೇಹಿತ ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗೆ ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
.2025 ಸುಧಾರಣೆಗಳ ವರ್ಷ; ಜಾಗತಿಕ ಕೇಂದ್ರವಾಗಿ ಹೊರಹೊಮ್ಮಿದ ಭಾರತ: ಪ್ರಧಾನಿ ಮೋದಿ.
ಗ್ರೀನ್ಲ್ಯಾಂಡ್ ವಶಕ್ಕೆ ಪಡೆಯುವ ತಮ್ಮ ನಿರ್ಧಾರಕ್ಕೆ ಬೆಂಬಲ ನೀಡದ ಯುರೋಪಿನ ಕೆಲವು ರಾಷ್ಟ್ರಗಳ ಮೇಲೆ ಶೇ 10ರಷ್ಟು ಸುಂಕ ವಿಧಿಸುವುದಾಗಿ ಬೆದರಿಕೆ ಒಡ್ಡಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
.ಗ್ರೀನ್ಲ್ಯಾಂಡ್ ಸ್ವಾಧೀನಕ್ಕೆ ಟ್ರಂಪ್ ಪಟ್ಟು: ನಮಗೆ ಸಂಬಂಧಿಸಿದ್ದಲ್ಲ ಎಂದ ರಷ್ಯಾ.
ಭಗವಾಧ್ವಜ ಹಾರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿರುವ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾದರೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಸಿದ್ದಾರೆ.
.ಉಡುಪಿ ಅಭಿವೃದ್ಧಿ ಯೋಜನೆ ವರದಿಗೆ ನಿಖರ ದತ್ತಾಂಶ ಸಂಗ್ರಹಿಸಿ: ಜಿಲ್ಲಾಧಿಕಾರಿ.
ರಾಜ್ಯ ಸರ್ಕಾರಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಅಂಶಗಳಿವೆ ಎಂಬ ಆಕ್ಷೇಪ ಎತ್ತಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್, ಗುರುವಾರ(ಜ.22) ಆರಂಭವಾಗಲಿರುವ ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ನಿರಾಕರಿಸಿದ್ದಾರೆ. ಇದು ಸರ್ಕಾರ ಮತ್ತು ಲೋಕಭವನದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.
.ಫೆ. 17ರಿಂದ ಅಧಿವೇಶನ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ.
ಕೆಟ್ಟ ಆಡಳಿತದ ರಾಜ್ಯ ಸರ್ಕಾರವನ್ನು ಕಿತ್ತೆಸೆಯಬೇಕು ಎಂಬುದು ಜನರ ಬಯಕೆ. ಅದಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷಗಳ ನಾಯಕರು ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
.ಬಿಜೆಪಿ–ಜೆಡಿಎಸ್ ಮೈತ್ರಿ: ಸ್ಥಳೀಯ ನಾಯಕರಿಗಿಲ್ಲ ಖಾತ್ರಿ!.
‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರ ಪಾತ್ರದ ಜೊತೆಗೆ ನಮ್ಮದೇ ಸ್ಥಳೀಯ ಹಿರಿ–ಕಿರಿಯ ಪೊಲೀಸ್ ಅಧಿಕಾರಿಗಳ ಪಾತ್ರವೂ ಇದೆ. ಇದೊಂದು ಸಂಘಟಿತ ಅಪರಾಧ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ.
.ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ: ಧಾರ್ಮಿಕ ಭಾವನೆಗಳಿಗೆ ಅಪಚಾರ; ಹೈಕೋರ್ಟ್ ಕಿಡಿ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹಣದ ಆಸೆಗಾಗಿ ಸ್ವಂತ ದೊಡ್ಡಪ್ಪ ಮತ್ತು ದೊಡ್ಡಮ್ಮನಿಗೆ ಆಯುರ್ವೇದ ವೈದ್ಯನೊಬ್ಬ ಅರಿವಳಿಕೆ ಚುಚ್ಚುಮದ್ದು ನೀಡಿ ಕೊಲೆ ಮಾಡಿರುವುದು ಗೊತ್ತಾಗಿದ್ದು, ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ.
.ಶಿವಮೊಗ್ಗ | ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ.
ಮಯಂಕ್ ಅಗರವಾಲ್ ನಾಯಕತ್ವದ ಕರ್ನಾಟಕ ತಂಡವು ಈ ಋತುವಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಎರಡನೇ ಚರಣದಲ್ಲಿಯೂ ತನ್ನ ಪ್ರಾಬಲ್ಯವನ್ನು ಮುಂದುವರಿಸುವ ಛಲದಲ್ಲಿದ್ದು ಗುರುವಾರ ಮಧ್ಯಪ್ರದೇಶ ವಿರುದ್ಧ ಪಂದ್ಯ ಆರಂಭವಾಗಿದೆ.
.ರಣಜಿ ಟ್ರೋಫಿ | ಮಯಂಕ್ ಶತಕ; ಅಭಿನವ್ ಅಬ್ಬರ: ಕರ್ನಾಟಕ–ಮಹಾರಾಷ್ಟ್ರ ಪಂದ್ಯ ಡ್ರಾ.
ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಮಿಂಚಿನ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಬುಧವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ 48 ರನ್ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು
.IND vs NZ T20|ಭಾರತ–ನ್ಯೂಜಿಲೆಂಡ್ ಮುಖಾಮುಖಿ: ಲಯಕ್ಕೆ ಮರಳುವ ಒತ್ತಡದಲ್ಲಿ ಸೂರ್ಯ.
ಎಸ್.ಮಹೇಂದರ್, ಹಂಸಲೇಖ ಒಟ್ಟಾಗಿ ಚಿತ್ರ ಮಾಡುತ್ತಿರುವ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು ‘ಕೆಂಬರಗ’ ಎಂದು ಹೆಸರಿಡಲಾಗಿದೆ.
.Sandalwood: ಮತ್ತೆ ಒಂದಾದ ಎಸ್. ಮಹೇಂದರ್ – ಹಂಸಲೇಖ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.