ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ ಯೋಜನೆಗೆ ಬೆಂಗಳೂರು ಹೊರತುಪಡಿಸಿ ನಗರ ಯೋಜನಾ ಆಯುಕ್ತಾಲಯ ರಚನೆ

Published 7 ನವೆಂಬರ್ 2023, 15:48 IST
Last Updated 7 ನವೆಂಬರ್ 2023, 15:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿ ರಾಜ್ಯದಲ್ಲಿರುವ ಎಲ್ಲ ನಗರಾಭಿವೃದ್ಧಿ ಪ್ರಾಧಿಕಾರಗಳು, ನಗರ ಯೋಜನಾ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಕಾರ್ಯನಿರ್ವಹಣೆಯ ಮೇಲುಸ್ತುವಾರಿಗೆ ನಗರ ಯೋಜನಾ ಆಯುಕ್ತಾಲಯವನ್ನು ರಚಿಸಲಾಗಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಕಚೇರಿಯ ಹೆಸರನ್ನು ‘ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ’ ಎಂದು ಬದಲಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು– ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರವನ್ನು (ಬಿಎಂಐಸಿಎಪಿಎ) ನಗರ ಯೋಜನಾ ಆಯುಕ್ತಾಲಯದ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ 35 ಸಹಾಯಕ ನಿರ್ದೇಶಕರ ಹುದ್ದೆಗಳಲ್ಲಿ ಒಂದನ್ನು ಉನ್ನತೀಕರಿಸಿ, ಆಯುಕ್ತರ ಹುದ್ದೆಯನ್ನು ಸೃಜಿಸಲಾಗಿದೆ. ಈ ಹುದ್ದೆಗೆ ಹಿರಿಯ ಶ್ರೇಣಿಯ ಐಎಎಸ್‌ ಅಧಿಕಾರಿಯನ್ನು ನೇಮಿಸಲು ಅವಕಾಶ ಕಲ್ಪಿಸಲಾಗಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಿರ್ದೇಶಕರ ಅಧಿಕಾರ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ನಗರಾಭಿವೃದ್ಧಿ ಪ್ರಾಧಿಕಾರಗಳು, ನಗರ ಯೋಜನಾ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯು ಸರ್ಕಾರಕ್ಕೆ ಸಲ್ಲಿಸುವ ಎಲ್ಲ ಪ್ರಸ್ತಾವಗಳನ್ನು ನಗರ ಯೋಜನಾ ಆಯುಕ್ತರ ಮೂಲಕವೇ ರವಾನಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT