ಬೆಂಗಳೂರು: ಆರೋಗ್ಯ ಇಲಾಖೆಯು ವೈದ್ಯಾಧಿಕಾರಿಗಳನ್ನು ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ಬೆಂಗಳೂರಿಗೆ ಸಂಬಂಧಿಸಿದಂತೆ ಜಯನಗರ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹುದ್ದೆಗೆ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ.ಸುರೇಂದ್ರ ಕೆ.ಎಸ್., ಸ್ಥಾನಿಕ ವೈದ್ಯಾಧಿಕಾರಿ (ಆರ್‌ಎಂಒ) ಹುದ್ದೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ.ಪದ್ಮಾ ಜಿ.ಎಲ್. ಅವರನ್ನು ವರ್ಗಾಯಿಸಲಾಗಿದೆ.
ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹುದ್ದೆಗೆ ಅದೇ ಆಸ್ಪತ್ರೆಯ ಆರ್‌ಎಂಒ ಡಾ.ಬಿ.ಆರ್. ಮೋಹನ್ ಅವರನ್ನು ನೇಮಿಸಲಾಗಿದೆ.