ಬೆಂಗಳೂರು:ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ (ಜೆಡಿಎಸ್) ಬೆಂಬಲಿತ ಮಂಗಳಮುಖಿ ಮಮತಾ ವಿಜಯ ದಾಖಲಿಸಿದ್ದರು.

ಇದನ್ನು ಉಲ್ಲೇಖ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಲಿಂಗತ್ವ ಅಲ್ಪ ಸಂಖ್ಯಾತರ ಸಬಲೀಕರಣದತ್ತ ಜೆಡಿಎಸ್ ಇಟ್ಟ ಮೊದಲ ಹೆಜ್ಜೆ ಇದಾಗಿದೆ ಎಂದು ಹೇಳಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಮಂಗಳಮುಖಿ ಮಮತಾ ಗೆಲುವು ಸಾಧಿಸಿದ್ದರು. ಅವರಿಗೆ ಅಭಿನಂದನೆ ಸಲ್ಲಿಸಿರುವ ಕುಮಾರಸ್ವಾಮಿ, ಸಮುದಾಯದ ಪ್ರತಿನಿಧಿಯಾಗಿ ಮಮತಾ ಗುರುತಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ:ಸ್ಮಾರ್ಟ್ ಸಿಟಿ ಯೋಜನೆ ಶೀಘ್ರವೇ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಸಿಎಂ ಸೂಚನೆ

ಸಾಮಾಜಿಕವಾಗಿ ತಿರಸ್ಕಾರಕ್ಕೊಳಗಾದ ವರ್ಗವೊಂದರಕ್ಕೆ ಬೆಂಬಲವಾಗಿ ನಿಂತಿದ್ದಕ್ಕೆ ಹಮ್ಮೆ ಇದೆ. ಇದು ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣದ ಹೆಜ್ಜೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವು ಗಮನಾರ್ಹ ಸಾಧನೆ ಮಾಡಿದೆ. ರಾಜಕೀಯ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ತಕರ್ತರ ಕೆಚ್ಚೆದೆಯ ಹೋರಾಟ ತೋರಿದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.