ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನಿಗಮದ ಕ್ರಮ ಎತ್ತಿಹಿಡಿದ ಹೈಕೋರ್ಟ್‌

Published 23 ಆಗಸ್ಟ್ 2023, 16:34 IST
Last Updated 23 ಆಗಸ್ಟ್ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ರಸ್ತೆ ಸಾರಿಗೆ ನಿಗಮಗಳು ನಿವೃತ್ತ ಸಿವಿಲ್, ಜಿಲ್ಲಾ ನ್ಯಾಯಾಧೀಶರು ಅಥವಾ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ವಿಚಾರಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿಕೊಳ್ಳಬಹುದು‘ ಎಂದು ಹೈಕೋರ್ಟ್ ಆದೇಶಿಸಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಎನ್‌ಇಕೆಆರ್‌ಟಿಸಿ) ಸಿಬ್ಬಂದಿ, ಶಿಸ್ತು (ಡಿಸಿಪ್ಲಿನರಿ) ಕ್ರಮದ ವಿಚಾರಣೆಗೆ ನಿವೃತ್ತ ಸಿವಿಲ್ ಮತ್ತು ಜಿಲ್ಲಾ ನ್ಯಾಯಾಧೀಶರನ್ನು ಹಾಗೂ ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕ ಮಾಡಿದ್ದನ್ನು ಮತ್ತು ತದನಂತರ ಅವರು ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ; ಈ ನಿಟ್ಟಿನಲ್ಲಿ ಎನ್‌ಇಕೆಆರ್‌ಟಿಸಿ ಕೈಗೊಂಡಿದ್ದ ಕ್ರಮವನ್ನು ಎತ್ತಿಹಿಡಿದಿದೆ.

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿ (ನಡವಳಿಕೆ ಮತ್ತು ಶಿಸ್ತು) ನಿಯಮಾವಳಿ 1971ರ ನಿಯಮ 23(2)ರಲ್ಲಿ ಪ್ರಾಧಿಕಾರ (ಅಥಾರಿಟಿ) ಎನ್ನುವ ಪದವನ್ನು ಬಳಕೆ ಮಾಡಲಾಗಿದೆ. ಆದರೆ ಇದೇ ಕಾರಣಕ್ಕೆ ಆರ್‌ಟಿಸಿಯ ಅಧಿಕಾರಿಯನ್ನು ಬಿಟ್ಟು ಬೇರೆಯವರನ್ನು ನೇಮಕ ಮಾಡಬಾರದೆಂದೇನೂ ಇಲ್ಲ‘ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT