ಬೆಂಗಳೂರು: ಸಗಟು ಲೆಕ್ಕದಲ್ಲಿ ಡೀಸೆಲ್ ಖರೀದಿ ದರ ಏರಿಕೆಯಾಗಿರುವುದು ಮೊದಲೇ ಸಂಕಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ದಿನಕ್ಕೆ ₹2.17 ಕೋಟಿ ಹೆಚ್ಚುವರಿ ಹೊರೆ ಆಗಲಿದೆ.

ಪ್ರತಿನಿತ್ಯ ಕೆಎಸ್‌ಆರ್‌ಟಿಸಿಗೆ 5.30 ಲಕ್ಷ ಲೀಟರ್, ಬಿಎಂಟಿಸಿಗೆ 2.06 ಲಕ್ಷ ಲೀಟರ್, ಎನ್‌ಡಬ್ಲ್ಯುಕೆಆರ್‌ಟಿಸಿಗೆ 2.82 ಲಕ್ಷ ಲೀಟರ್ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 2.50 ಲಕ್ಷ ಲೀಟರ್ ಡೀಸೆಲ್ ಬೇಕಾಗುತ್ತದೆ.

ಕೆಎಸ್‌ಆರ್‌ಟಿಸಿ ನಿತ್ಯದ ವರಮಾನ ₹7 ಕೋಟಿ ಇದ್ದರೆ ಡೀಸೆಲ್‌ಗೇ ₹5 ಕೋಟಿ ಖರ್ಚಾಗುತ್ತಿತ್ತು. ಈಗ ಹೆಚ್ಚುವರಿಯಾಗಿ ₹86.60 ಲಕ್ಷ ಹೊರೆ ಆಗಿದೆ. ಬಿಎಂಟಿಸಿ ನಿತ್ಯದ ವರಮಾನ ₹3.10 ಕೋಟಿ ಇದ್ದರೆ ಡೀಸೆಲ್‌ಗೆ ₹2.10 ಕೋಟಿ ಖರ್ಚಾಗುತ್ತಿತ್ತು. ಈಗ ₹35 ಲಕ್ಷ ಹೆಚ್ಚುವರಿಯಾಗಿ ಸೇರಿಕೊಂಡಿದೆ. ಎನ್‌ಡಬ್ಲ್ಯುಕೆಆರ್‌ಟಿಸಿಗೆ ₹48.97 ಲಕ್ಷ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ₹43.41 ಲಕ್ಷ ಹೆಚ್ಚುವರಿ ಡೀಸೆಲ್ ವೆಚ್ಚ ಹೊರೆಯಾಗಿದೆ.

ಈ ನಷ್ಟದಿಂದ ಪಾರು ಮಾಡಲು ಕೋರಿ ನಾಲ್ಕೂ ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಆದರೂ, ಪ್ರಯಾಣ ದರ ಹೆಚ್ಚಳ ಮಾಡುವ ಸಾಧ್ಯತೆಗಳಿಲ್ಲ.

‘ಡೀಸೆಲ್ ಖರೀದಿ ದರದ ಹೊರೆ ಸಾರಿಗೆ ಸಂಸ್ಥೆಗಳಿಗೆ ಹೆಚ್ಚಾಗಿದ್ದು, ತಮಿಳುನಾಡಿನಲ್ಲಿ ಈ ಹೆಚ್ಚುವರಿ ಮೊತ್ತವನ್ನು ಅಲ್ಲಿನ ಸರ್ಕಾರ ಸಹಾಯಧನದ ರೂಪದಲ್ಲಿ ಸಾರಿಗೆ ಸಂಸ್ಥೆಗೆ ನೀಡುತ್ತಿದೆ. ಅದೇ ರೀತಿಯ ನೆರವು ನೀಡಬೇಕು ಎಂದು ನಾವೂ ಕೇಳಿದ್ದೇವೆ. ಸರ್ಕಾರದ ಮಟ್ಟದಲ್ಲಿ ಪರಿಶೀಲನೆ ಹಂತದಲ್ಲಿದೆ. ಟಿಕೆಟ್ ದರ ಹೆಚ್ಚಳ ಮಾಡಿ ಆ ಹೊರೆಯನ್ನು ಪ್ರಯಾಣಿಕರ ಮೇಲೆ ವರ್ಗಾಯಿಸುವ ಆಲೋಚನೆ ಇಲ್ಲ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.