ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಮುಷ್ಕರ ಅಂತ್ಯಗೊಳಿಸಲು ಯತ್ನ

ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ
Last Updated 13 ಡಿಸೆಂಬರ್ 2020, 8:27 IST
ಅಕ್ಷರ ಗಾತ್ರ

ಬೆಂಗಳೂರು: ಮುಷ್ಕರದಲ್ಲಿ ಭಾಗಿಯಾಗಿರುವ ಸಾರಿಗೆ ನಿಗಮಗಳ ನೌಕರರನ್ನು ಮನವೊಲಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ ಸಭೆ ನಡೆದಿದೆ.

ಮುಖ್ಯಮಂತ್ರಿ ನೇತೃತ್ವದ ಸಭೆ ಮುಕ್ತಾಯಗೊಂಡಿದೆ. ಅರ್ಧ ಗಂಟೆಯಲ್ಲಿ ಅಂತಿಮನಿರ್ಧಾರ ಕೈಗೊಳ್ಳುವುದಾಗಿ ಉಪ‌ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ

ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಾರಿಗೆ ಸಚಿವರೂ ಆಗಿರುವ ಉಪ‌ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ) ಅಧ್ಯಕ್ಷ ಚಂದ್ರಪ್ಪ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.‌ಶಿಖಾ, ಸಾರಿಗೆ ಆಯುಕ್ತ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಸಾರಿಗೆ ನೌಕರರ ಮನವೊಲಿಕೆ ಅಥವಾ ಖಾಸಗಿ ಬಸ್ ಗಳನ್ನು ಓಡಿಸುವ ಕುರಿತು ಸಭೆಯಲ್ಲಿ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT