ಬೆಂಗಳೂರು: ‘ಹೈಕೋರ್ಟ್ ಆದೇಶ ಉಲ್ಲಂಘಿಸಿ ಮುಷ್ಕರಕ್ಕೆ ಮಂದಾಗಿರುವ ಸಾರಿಗೆ ನೌಕರರ ವಿರುದ್ಧ ತೀವ್ರ ಅತೃಪ್ತಿ ವ್ಯಕ್ತಪಡಿಸಿರುವ ಹೈಕೋರ್ಟ್, ‘ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

'ಮುಷ್ಕರ ನಡೆಸಲು ಸಿಬ್ಬಂದಿಗೆ ಅವಕಾಶ ನೀಡಬಾರದು’ ಎಂದು ಕೋರಿ ನಗರದ ಜೆ.ಸುನಿಲ್ ಸೇರಿದಂತೆ ಐವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು, ‘ರಾಜಿ ಸಂಧಾನದ ಮಾತುಕತೆ ಏನಾಗಿದೆ’ ಎಂದು ಪ್ರಶ್ನಿಸಿದರು. ಇದಕ್ಕೆ ಅರ್ಜಿದಾರರ ಪರ ಹೈಕೋರ್ಟ್ ವಕೀಲೆ ದೀಕ್ಷಾ ಎನ್.ಅಮೃತೇಶ್, ‘ಮಂಗಳವಾರ (ಆ.5) ನಡೆಸಬೇಕಿದ್ದ ಉದ್ದೇಶಿತ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿ. ಸರ್ಕಾರದ ಜೊತೆಗಿನ ಮಾತುಕತೆಯ ಫಲಶೃತಿ ಗಮನಿಸಿ ಮುಂದುವರೆಯಬಹುದು ಎಂದು ಹೈಕೋರ್ಟ್ ನಿನ್ನೆಯಷ್ಟೇ ಮುಷ್ಕರ ನಿರತ ಸಂಘಟನೆಗೆ ನಿರ್ದೇಶನ ನೀಡಿತ್ತು. ಆದರೆ, ಇದನ್ನು ಲೆಕ್ಕಿಸದೆ ಮುಷ್ಕರ ಮುಂದುವರೆಸಲಾಗಿದೆ’ ಎಂದು ಆರೋಪಿಸಿದರು.

ಇದೇ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಔದ್ಯೋಗಿಕ ವಿವಾದ ಕಾಯ್ದೆ–1947ರ ಅನ್ವಯ ಸಂಧಾನ ಸಭೆ ನಡೆಸಲಾಗುತ್ತಿದೆ’ ಎಂದರು.

‘ಮುಷ್ಕರ ನಿಲ್ಲಿಸಿದ್ದೀರೊ ಇಲ್ಲವೊ’ ಎಂದು ಮುಖ್ಯ ನ್ಯಾಯಮೂರ್ತಿಗಳು ಪದೇ ಪದೇ ಕೇಳಿದ ಪ್ರಶ್ನೆಗೆ ಪ್ರತಿವಾದಿಯೂ ಆದ, ಮುಷ್ಕರಕ್ಕೆ ಕರೆ ಕೊಟ್ಟಿರುವ ಜಂಟಿ ಕ್ರಿಯಾ ಸಮಿತಿ ಪರ ವಕೀಲರು, ‘ಬೆಂಗಳೂರು ನಗರದಲ್ಲಿ ಬಿಎಂಟಿಸಿ ಸಾರಿಗೆ ವ್ಯವಸ್ಥೆ ಬಹುತೇಕ ಎಂದಿನಂತೆಯೇ ಇದೆ’ ಎಂದು ವಿವರಿಸಿದರು.

ಆದರೆ, ಇದಕ್ಕೆ ತೃಪ್ತರಾಗದ ಮುಖ್ಯ ನ್ಯಾಯಮೂರ್ತಿಗಳು, ‘ಕೋರ್ಟ್ ಆದೇಶಗಳಿಗೆ ಅವಿಧೇಯ ನಡೆದುಕೊಳ್ಳುವ ನೌಕರರನ್ನು ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಕಾಯ್ದೆ–2013ರ ಕಲಂ 8ರ ಅಡಿಯಲ್ಲಿ ಯಾವುದೇ ವಾರಂಟ್ ಇಲ್ಲದೆಯೇ ಬಂಧಿಸಬಹುದಾಗಿದೆ ಎಂಬುದರ ಅರಿವಿಲ್ಲವೇ ನಿಮಗೆ’ ಕಲಂ 8 ಮತ್ತು 9ರ ಅಡಿಯಲ್ಲಿ ನಿಮ್ಮ ಮೇಲೆ ಯಾಕೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬಾರದು’ ಎಂದು ಪಶ್ನಿಸಿದರು.

‘ಮುಷ್ಕರ ಸ್ಥಗಿತಗೊಂಡಿದೆ ಎಂಬ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಜನಸಾಮಾನ್ಯರು ಬಳಲುವಂತೆ ಮಾಡುವುದನ್ನು ಸಹಿಸುವುದಿಲ್ಲ’ ಎಂದು ಎಚ್ಚರಿಸಿದರು. ಮಧ್ಯಂತರ ತಡೆ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಿದರು.
.LIVE | ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ KSRTC ಬಸ್ಗಳು; ಸಂಚಾರದಲ್ಲಿ ಭಾರಿ ವ್ಯತ್ಯಯ.Photos | ಸಾರಿಗೆ ನೌಕರರ ಮುಷ್ಕರ: ಕಾದು ಕುಳಿತರೂ ಬರಲಿಲ್ಲ ಬಸ್.ಸಾರಿಗೆ ನೌಕರರ ಮುಷ್ಕರ: ಒಂದು ದಿನದ ಮಟ್ಟಿಗೆ ತಡೆ ನೀಡಿದ ಹೈಕೋರ್ಟ್.ಅನಿಶ್ಚಿತತೆಯಲ್ಲಿ ಸಾರಿಗೆ ಮುಷ್ಕರ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.