ಬೆಂಗಳೂರು: ಕೆಎಸ್ಆರ್ಟಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ಡಿ.5 ಮತ್ತು ಡಿ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಬೇಡಿಕೆ ಈಡೇರಿಕೆ ಕುರಿತು ಅಂತಿಮ ಚರ್ಚೆ ನಡೆಸಲಿದ್ದಾರೆ.

‘38 ತಿಂಗಳ ವೇತನ ಬಾಕಿ ನೀಡಬೇಕು. 2024ರ ಜನವರಿಯಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ಇತರೆ ಬೇಡಿಕೆಗಳನ್ನು ಕಾಲಮಿತಿಯ ಒಳಗೆ ಈಡೇರಿಸಬೇಕು’ ಎಂಬ ಸಂಘಟನೆಗಳ ಬೇಡಿಕೆ ಕುರಿತು ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆ ಅಪೂರ್ಣಗೊಂಡಿತು. ಹಾಗಾಗಿ, ಸಭೆಯನ್ನು ಡಿಸೆಂಬರ್ಗೆ ಮುಂದೂಡಲಾಯಿತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.