ಬೆಂಗಳೂರು: ವೇತನ ಬಾಕಿ ಪಾವತಿ ಸೇರಿದಂತೆ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ನ.28ರಂದು ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ.

ಶೇಷಾದ್ರಿಪುರದ ಶಿರೂರು ಪಾರ್ಕ್ ರಸ್ತೆಯಲ್ಲಿರುವ ಆರ್.ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ನಾಲ್ಕೂ ನಿಗಮಗಳ ಸಾರಿಗೆ ನೌಕರರು ಭಾಗವಹಿಸುವರು. 38 ತಿಂಗಳ ವೇತನ ಬಾಕಿ ನೀಡಬೇಕು. 2024ರ ಜನವರಿಯಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ಇತರೆ ಬೇಡಿಕೆಗಳನ್ನು ಕಾಲಮಿತಿಯ ಒಳಗೆ ಈಡೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.