ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ–ಯಡಿಯೂರಪ್ಪ

Published 11 ಮೇ 2024, 7:44 IST
Last Updated 11 ಮೇ 2024, 7:44 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಇಲ್ಲಿ ವೇದಿಕೆ ಹಂಚಿಕೊಂಡರು.

ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹಾಗೂ ಸಾಂಸ್ಕೃತಿಕ ಟ್ರಸ್ಟ್, ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ಮತ್ತು ಸಮಾನತೆ ಪ್ರಕಾಶನದ ಸಹಯೋಗದಲ್ಲಿ ಇಲ್ಲಿನ ಮಾನಂದವಾಡಿ ರಸ್ತೆಯ ರೇಷ್ಮೆ ಕಾರ್ಖಾನೆ ಎದುರು ಶನಿವಾರ ಆಯೋಜಿಸಿದ್ದ 'ಸ್ವಾಭಿಮಾನಿಗೆ ಸಾವಿರದ ನುಡಿನಮನ'- ವಿ.ಶ್ರೀನಿವಾಸ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು.

ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ‌ ಆಸೀನರಾಗಿದ್ದರು. ಯಡಿಯೂರಪ್ಪ ಅವರು ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

ಆದರೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಮುಖ್ಯಮಂತ್ರಿ ಬರುವುದಕ್ಕೆ ಮುನ್ನವೇ ಮಾತನಾಡಿ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ಟಿ.ಎಸ್.‌ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ, ಶ್ರೀನಿವಾಸ ಪ್ರಸಾದ್ ಪತ್ನಿ ಭಾಗ್ಯಲಕ್ಷ್ಮಿ, ಸಿ.ಎಸ್. ದ್ವಾರಕನಾಥ್, ಪಿಜಿಆರ್ ಸಿಂಧ್ಯಾ, ಶ್ರೀನಿವಾಸ ಪ್ರಸಾದ್ ಅವರ ಮೂವರು ಪುತ್ರಿಯರು ಹಾಗೂ ಅಳಿಯಂದಿರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT