ಬೆಂಗಳೂರು: ‘ಲವ್ ಜಿಹಾದ್’ನಿಂದ ಹಿಂದೂ ಮಹಿಳೆಯರನ್ನು ರಕ್ಷಿಸಲು ಹಾಗೂ ಧೈರ್ಯ ತುಂಬಲು ರಾಜ್ಯದ 100 ಕಡೆಗೆ ತ್ರಿಶೂಲ ದೀಕ್ಷೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರೀತಿಯ ಹೆಸರಿನಲ್ಲಿ ‘ಲವ್ ಜಿಹಾದ್’ ಎಂಬ ಷಡ್ಯಂತ್ರ ನಡೆಯುತ್ತಿದೆ. ಇಸ್ಲಾಂ ಧರ್ಮದ ಜನಸಂಖ್ಯೆ ಹೆಚ್ಚಿಸಲು, ಹಿಂದೂಗಳ ನೈತಿಕತೆ ಕುಸಿಯುವಂತೆ ಮಾಡಲು, ವೇಶ್ಯಾವಾಟಿಕೆ, ಭಯೋತ್ಪಾದನೆಗೆ, ಮಾದಕವಸ್ತುಗಳ ಕಳ್ಳಸಾಗಣೆಗೆ ಲವ್ ಜಿಹಾದ್’ ನಡೆಸಲಾಗುತ್ತಿದೆ. ಸರ್ಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಪೊಲೀಸ್ ಇಲಾಖೆ ‘ಲವ್ ಜಿಹಾದ್’ ಪ್ರಕರಣಗಳ ವಿರುದ್ಧ ತಕರಾರು ಅರ್ಜಿಗಳನ್ನು ಸ್ವೀಕರಿಸಬೇಕು. ಇಂತಹ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಗಳ ಮೂಲಕ ನಾಲ್ಕು ತಿಂಗಳೊಳಗೆ ಇತ್ಯರ್ಥಗೊಳಿಸಿ, ಆರೋಪಿಗಳಿಗೆ ಶಿಕ್ಷೆ ವಿಧಿಸುವಂತಾಗಬೇಕು. ಮುಸ್ಲಿಂ ಸಮುದಾಯದ ಮುಖಂಡರು ತಮ್ಮ ಯುವಕರಿಗೆ ‘ಲವ್ ಜಿಹಾದ್’ ಬಗ್ಗೆ ಎಚ್ಚರಿಸಬೇಕು. ಈ ಬಗ್ಗೆ ಶಾಲಾ–ಕಾಲೇಜುಗಳಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುವುದು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ‘ಲವ್ ಜಿಹಾದ್’ ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆಗೊಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.