ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳು ಸಾಹಿತ್ಯ ಅಕಾಡೆಮಿ ಮೂವರಿಗೆ ಗೌರವ ಪ್ರಶಸ್ತಿ

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ
Last Updated 28 ಫೆಬ್ರುವರಿ 2019, 16:38 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಲಲಿತಾ ರೈ, ನಾಟಕ ಕ್ಷೇತ್ರದಿಂದ ರತ್ನಾಕರ ರಾವ್ ಕಾವೂರು ಹಾಗೂ ಸಿನಿಮಾ ಕ್ಷೇತ್ರದಿಂದ ಎ.ಕೆ.ವಿಜಯ್‌ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹ 50 ಸಾವಿರ ನಗದು ಒಳಗೊಂಡಿದೆ.

ಪುಸ್ತಕ ಬಹುಮಾನಕ್ಕೆ ಕವನ ವಿಭಾಗದಲ್ಲಿ ಶಾಂತಾರಾಮ ವಿ.ಶೆಟ್ಟಿ ಅವರ ‘ಮಣ್ಣ ಬಾಜನೊ’, ಕಾದಂಬರಿ ವಿಭಾಗದಲ್ಲಿ ರಾಜಶ್ರೀ ತಾರಾನಾಥ ರೈ ಪೆರ್ಲ ಅವರ ‘ಕೊಂಬು’ ಕೃತಿ ಆಯ್ಕೆಯಾಗಿವೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಒಳಗೊಂಡಿದೆ.

ಮಾರ್ಚ್ 23ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT