ತುಮಕೂರು: ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕಾರ್ಯಕ್ರಮ ನಡೆಸಲು ಹಣವಿಲ್ಲ. ಮೇ 19ರಂದು ನಗರದಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ, ಶೂನ್ಯ ಸಮಾವೇಶ ಎಂದು ಶಾಸಕ ಬಿ.ಸುರೇಶ್ಗೌಡ ಇಲ್ಲಿ ಸೋಮವಾರ ಟೀಕಿಸಿದರು.

‘ಬಡವರ, ರೈತರ, ಜನರ ವಿರೋಧಿ ಸಮಾವೇಶ. ಭೂಸ್ವಾಧೀನದ ಹಣದಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಇದರಿಂದ ಬಿಜೆಪಿ– ಜೆಡಿಎಸ್ ಶಾಸಕರು ಭಾಗವಹಿಸುತ್ತಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶೇ 80ರಷ್ಟು ಭ್ರಷ್ಟಾಚಾರದ ಸರ್ಕಾರ ಎಂದು ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಚಕಾರ ಎತ್ತುತ್ತಿಲ್ಲ. ‘ಮೌನಂ ಸಮ್ಮತಿ ಲಕ್ಷಣಂ’ ಎಂಬಂತಾಗಿದೆ. ಮುಖ್ಯಮಂತ್ರಿ ಮುಡಾ ಹಗರಣ ಆರೋಪ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಎನ್ಸಿಆರ್ಬಿ ವರದಿ ಪ್ರಕಾರ ಆತ್ಮಹತ್ಯೆಯಲ್ಲಿ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನ ಪಡೆದಿದೆ ಎಂದರು.

8 ಲಕ್ಷ ಕೋಟಿ ಸಾಲ ಮಾಡಿರುವುದೇ ಸರ್ಕಾರದ 3 ವರ್ಷದ ಸಾಧನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಕುರ್ಚಿಗಾಗಿ ಬಣಗಳು ಸೃಷ್ಟಿಯಾದವು. ರಾಜ್ಯ ಮಟ್ಟದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಬಣಗಳಿವೆ. ಜಿಲ್ಲೆಯಲ್ಲಿ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಬಣಗಳಾಗಿವೆ. ಸರ್ಕಾರದ ಆಡಳಿತ ಕುಸಿದು ಹೋಗಿದೆ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಸಮಾನತೆ ಉದ್ದೇಶದಿಂದ ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿತ್ತು. ಕಾಂಗ್ರೆಸ್ ಮತ್ತೆ ಹಿಜಾಬ್ ಜಾರಿಗೊಳಿಸಿ, ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಮುಸ್ಲಿಮರನ್ನು ಮನುಷ್ಯರನ್ನಾಗಿ ನೋಡದೆ ಓಟ್ ಬ್ಯಾಂಕ್ ರೀತಿ ನೋಡುತ್ತಿದೆ ಎಂದು ದೂರಿದರು.

ಗ್ಯಾರಂಟಿ ಯೋಜನೆಗಳಲ್ಲಿ ಕಾಂಗ್ರೆಸ್ ಮೈ ಮರೆತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರದ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯವನ್ನು ದಿವಾಳಿ ಹಂತಕ್ಕೆ ತೆಗೆದುಕೊಂಡು ಹೋಗಿದೆ. ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ, ಸರ್ಕಾರ ವಿಸರ್ಜಿಸಬೇಕು ಎಂದು ಆಗ್ರಹಿಸಿದರು.

ಇರಾನ್- ಅಮೆರಿಕ- ಇಸ್ರೇಲ್ ಯುದ್ಧದಿಂದ ತೈಲ ಬೆಲೆ ಹೆಚ್ಚಳವಾಗಿದೆ. ವಿದೇಶಗಳಲ್ಲಿ ತೈಲ ಬೆಲೆಯನ್ನು ಶೇ 30ರಷ್ಟು ಹೆಚ್ಚಿಸಲಾಗಿದೆ. ದೇಶದಲ್ಲಿ ಶೇ 3ರಷ್ಟು ಮಾತ್ರ ಜಾಸ್ತಿ ಮಾಡಲಾಗಿದೆ ಎಂದು ಬೆಲೆ ಏರಿಕೆ ಸಮರ್ಥಿಸಿಕೊಂಡರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡರಾದ ಎಸ್.ಡಿ.ದಿಲೀಪ್ಕುಮಾರ್, ಎಂ.ಅಂಬಿಕಾ, ಹನುಮಂತರಾಜು, ಟಿ.ಕೆ.ಧನುಷ್, ಕೆ.ವೇದಮೂರ್ತಿ, ಆಂಜಿನಪ್ಪ, ಯಶೋದಮ್ಮ, ಜಗದೀಶ್, ಮರಿತಿಮ್ಮಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-17-1882050894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.