ತುಮಕೂರು: ನಗರದಲ್ಲಿ ಮೇ 19ರಂದು ನಡೆಯುವ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ ಮನವಿ ಮಾಡಿದರು.

ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪಕ್ಷದ ಬ್ಲಾಕ್ ಅಧ್ಯಕ್ಷರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದರು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿದ್ದು, ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದರು.

ರಾಜ್ಯ ಸರ್ಕಾರ ಜನರಿಗೆ ಪಂಚ ಗ್ಯಾರಂಟಿಗಳ ಜತೆಗೆ ಹಲವಾರು ಸವಲತ್ತು ನೀಡಿದೆ. ಕಂದಾಯ ಇಲಾಖೆಯ 60 ಸಾವಿರ, ಗ್ರಾಮೀಣಾಭಿವೃದ್ಧಿ ಇಲಾಖೆಯ 80 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಮುಂದಿನ ಜೂನ್ನಿಂದ ಎಸ್ಐಆರ್ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರು ತಮ್ಮ ಬ್ಲಾಕ್ನಲ್ಲಿ ಇರುವ ಬಿಎಲ್ಎ 2ಗಳ ಮೂಲಕ ಯಾರೊಬ್ಬರೂ ಮತಪಟ್ಟಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-17-1290125362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.