ತುಮಕೂರು:‘ರಾಜ್ಯ ಸರ್ಕಾರ ಮೂರನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಆಗಬಹುದು ಎಂಬುದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ನಾನು ಯಾವ ಬಣದಲ್ಲೂ ಗುರುತಿಸಿಕೊಂಡಿಲ್ಲ’ ಎಂದು ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆ ಮುಂದಿಟ್ಟುಕೊಂಡು ಪಕ್ಷದಲ್ಲಿ ಏನು ಬದಲಾವಣೆ ಮಾಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ದೃಷ್ಟಿಯಿಂದ ಒಳ್ಳೆಯ ನಿರ್ಧಾರ ಆಗುತ್ತವೆ. ಮೇ 5ರ ಒಳಗೆ ಮತ್ತೊಮ್ಮೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡುವ ಚಿಂತನೆಯಲ್ಲಿದ್ದೇವೆ ಎಂದರು.

ಸಚಿವ ಸಂಪುಟದಲ್ಲಿ ಹೊಸದಾಗಿ 20 ಶಾಸಕರಿಗೆ ಅವಕಾಶ ನೀಡುವಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಮನವಿ ಮಾಡಿದ್ದು, ಅವರು ಬಹುತೇಕ ಒಪ್ಪಿಗೆ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಚರ್ಚೆಯಾಗಿಲ್ಲ. ಸಚಿವ ಸಂಪುಟ ಪುನರ್ ರಚನೆ ಮಾತ್ರ ಪಕ್ಕಾ ಆಗುತ್ತದೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.