ತುಮಕೂರು: ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳ, ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ನಗರದ ಕೇಂದ್ರ ಸಚಿವ ವಿ.ಸೋಮಣ್ಣ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.

‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಿಸಿದ್ದು, ಕೇಂದ್ರ ಕೂಡಲೇ ಅನುಮೋದನೆ ನೀಡಬೇಕು. ಇದನ್ನು ಸಂವಿಧಾನದ ಶೆಡ್ಯೂಲ್ 9ರಲ್ಲಿ ಸೇರಿಸಬೇಕು. ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಂಸತ್ತಿನಲ್ಲಿ ಧ್ವನಿ ಎತ್ತಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ‘ಖಾಲಿ ಹುದ್ದೆಗಳ ಭರ್ತಿಗೆ ಕೇಂದ್ರ ಮುಂದಾಗಬೇಕು. ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 3 ಲಕ್ಷ ಉದ್ಯೋಗ ಭರ್ತಿ ಮಾಡಬೇಕು. ಸಕಾಲಕ್ಕೆ ಸರ್ಕಾರಿ ಹುದ್ದೆಗಳ ನೇಮಕಾತಿ ನಡೆಯದೆ ನಿರುದ್ಯೋಗ ಹೆಚ್ಚಾಗಿದೆ. ಇದನ್ನು ತಡೆಯಲು ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್, ‘ಕೇಂದ್ರ ಸರ್ಕಾರ ತಳ ಸಮುದಾಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಮೀಸಲಿಡುತ್ತಿರುವ ಅನುದಾನ ಕಡಿಮೆಯಾಗುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಹಣ ನೀಡಬೇಕು. ಪರಿಶಿಷ್ಟರ ಅನುದಾನ ಅನ್ಯ ಕಾರ್ಯಕ್ಕೆ ಬಳಸಬಾರದು’ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಮುಖಂಡರಾದ ಕಮಲಾ, ಎಸ್.ಡಿ.ಪಾರ್ವತಮ್ಮ, ರಾಜು, ವೆಂಕಟಪ್ಪ, ಕಲ್ಪನಾ, ಖಲೀಲ್, ಶಂಕರಪ್ಪ, ರಂಗಧಾಮಯ್ಯ, ಎಸ್.ರಾಘವೇಂದ್ರ, ಸಂತೋಷ್, ಗೋವಿಂದರಾಜು, ಹನುಮೇಶ್, ಅಶ್ವತ್ಥಪ್ಪ, ಕೃಷ್ಣಪ್ಪ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-735686583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.