ಶಿರಾ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನತೆ ಸಂಕಷ್ಟದಲ್ಲಿದ್ದಾರೆ. ಅವರ ನೋವಿಗೆ ಸ್ಪಂದಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಆಗ್ರಹಿಸಿದ್ದಾರೆ.

ಗೌಡಗೆರೆ ಹೋಬಳಿ ವ್ಯಾಪ್ತಿಯ ಹೆಚ್ಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೀರಿನ ಮೂಲಗಳು ಬತ್ತಿ ಹೋಗುತ್ತಿದ್ದು ದಿನದಿಂದ ದಿನಕ್ಕೆ ಸಮಸ್ಯೆ ಉಲ್ಬಣಗೊಳ್ಳುತ್ತಿದೆ.

ಗ್ರಾಮಸ್ಥರು ದಿನನಿತ್ಯದ ಅಗತ್ಯಗಳಿಗೆ ಅವಶ್ಯವಾದ ಕುಡಿಯುವ ನೀರನ್ನು ಪಡೆಯಲು ಪರದಾಡುವ ಸ್ಥಿತಿ ಇದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ತುರ್ತು ಕ್ರಮ ಕೈಗೊಂಡು ಹೆಚ್ಚುವರಿ ಕೊಳವೆ ಬಾವಿಗಳನ್ನು ಕೊರೆದು ನೀರಿನ ಲಭ್ಯತೆ ಹೆಚ್ಚಿಸುವ ಜತೆಗೆ ನಿಯಮಿತವಾಗಿ ಕುಡಿಯುವ ನೀರನ್ನು ಟ್ಯಾಂಕರ್ಗಳ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು ಎಂದರು.

ತಹಶೀಲ್ದಾರ್ ನೇತೃತ್ವದಲ್ಲಿ ತಾಲ್ಲೂಕಿನ ಪಿಡಿಒ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ (ಟಾಸ್ಕ್ ಫೋರ್ಸ್) ಸಮಿತಿ ರಚಿಸಿ ಸಮಸ್ಯೆ ಬಗೆಹರಿಸಲು ಸಮನ್ವಯತೆ ಸಾಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-306794356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.