ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮೇ 20ರಂದು ಮೂರು ವರ್ಷ ತುಂಬಲಿದ್ದು ನಗರದಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ನಗರದಲ್ಲಿ ಶನಿವಾರ ಸಮಾವೇಶ ಸಂಘಟನೆ, ಪೂರ್ವಭಾವಿ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು, ರಾಜ್ಯದ ವಿವಿಧೆಡೆಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಲಾಗುತ್ತದೆ.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ನಾಲ್ಕು ಸಾವಿರ ಬಸ್ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಈ ಮೊದಲು ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಿಲ್ಲೆಯಲ್ಲಿ ಕಂದಾಯ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು. ಅದೇ ದಿನ ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-17-1765010915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.