ತುಮಕೂರು: ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯ ಉಪ ನಿರ್ದೇಶಕರ ಖಾಲಿ ಹುದ್ದೆಗೆ ಕೃಷ್ಣಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ. ‘ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ’ ಎಂದು ಆದೇಶದ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಪಾವಗಡ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಮಾರ್ಚ್ 20 ರಂದು ತಮ್ಮ ಕಚೇರಿಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಮೇಲಧಿಕಾರಿ ಕೃಷ್ಣಪ್ಪ ತೊಂದರೆ ಕೊಡುತ್ತಿದ್ದರು. ತಡೆಯಲಾಗದೆ ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದು ಮಲ್ಲಿಕಾರ್ಜುನಯ್ಯ ಆತ್ಮಹತ್ಯೆಗೂ ಮುನ್ನ ವಿಡಿಯೊದಲ್ಲಿ ಹೇಳಿದ್ದರು.

ಮಲ್ಲಿಕಾರ್ಜುನಯ್ಯ ಪತ್ನಿ ನೀಡಿದ ದೂರು ಆಧರಿಸಿ ಕೃಷ್ಣಪ್ಪ ವಿರುದ್ಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಂತರ ಕೃಷ್ಣಪ್ಪ ರಜೆ ಮೇಲೆ ತೆರಳಿದ್ದರು. ಇದೀಗ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-17-119652122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.