ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ತುಂಡಾದ ಘಟನೆ ಕುರಿತಂತೆ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಅವರು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಭಾನುವಾರ ಬೆಳಿಗ್ಗೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.