ಹೊಸಪೇಟೆ (ವಿಜಯನಗರ): ಗೇಟ್ ಮುರಿದು ಭಾರಿ ನೀರು ಪೋಲಾಗುತ್ತಿರುವ ತುಂಗಭದ್ರಾ ಅಣೆಕಟ್ಟೆಯ ಸದ್ಯದ ಸ್ಥಿತಿಗತಿ ತಿಳಿಯುವ ಸಲುವಾಗಿ ಬೃಹತ್ ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಮಧ್ಯಾಹ್ನ ಇಲ್ಲಿಗೆ ಬರಲಿದ್ದು, ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಸಚಿವರ ಜತೆಗೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೂ ಬರಲಿದ್ದಾರೆ. ಮತ್ತೊಂದಡೆ ಹೈದರಾಬಾದ್ ಮತ್ತು ಚೆನ್ನೈಗಳಿಂದಲೂ ನೀರಾವರಿ ತಜ್ಞರು, ಎಂಜಿನಿಯರ್‌ಗಳು ಇಲ್ಲಿಗೆ ಹೊರಟಿದ್ದಾರೆ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.