ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ಮುರಿದು ಹೋಗಿರುವ ಕಾರಣ ಅದನ್ನು ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ಸೂಚಿಸಲಾಗಿದೆ.
ಅಣೆಕಟ್ಟೆಯ 19ನೇ ಗೇಟ್‌ನ ಚೈನ್ ಲಿಂಕ್ ಮುರಿದಿರುವುದು
ಅಣಕಟ್ಟೆಯ ಗೇಟ್ ಲಿಂಕ್ ಮುರಿದ ನಂತರ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ
ಮುರಿದು ಹೋಗಿರುವ ಚೈನ್ ಲಿಂಕ್ ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕು
ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ
ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವುದು
ಅಣಕಟ್ಟೆಯ ಗೇಟ್ ಲಿಂಕ್ ಮುರಿದಿರುವ ಸುದ್ದಿ ಕೇಳಿ ಜಲಾಶಯದತ್ತ ಬಂದಿರುವ ಸ್ಥಳೀಯರು
ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ (ಎಡದಿಂದ ಮೂರನೆಯವರು) ಇತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು
ಸಚಿವ ಶಿವರಾಜ ತಂಗಡಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು