ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ತುಂಗಭದ್ರಾ ಡ್ಯಾಂ: ಎರಡನೇ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಶೆ

Published 13 ಆಗಸ್ಟ್ 2024, 16:06 IST
Last Updated 13 ಆಗಸ್ಟ್ 2024, 16:06 IST
ಅಕ್ಷರ ಗಾತ್ರ

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ ಆಗಸ್ಟ್‌ 10ರ ಶನಿವಾರ ರಾತ್ರಿ ನೀರಿನಲ್ಲಿ ಕೊಚ್ಚಿ ಹೋದ ದಿನದಿಂದ ಈ ಭಾಗದ ರೈತರು ಆತಂಕದಲ್ಲಿದ್ದಾರೆ. ಜುಲೈನಲ್ಲಿಯೇ ತುಂಗಾಭದ್ರಾ ಡ್ಯಾಂ ಭರ್ತಿಯಾದಾಗ ಇಲ್ಲಿನ ರೈತರು ಸಂತಸದಲ್ಲಿದ್ದರು. ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ಅವರು, ಈ ವರ್ಷ ಎರಡು ಬೆಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಈವರೆಗೆ 20 ಟಿಎಂಸಿ ಅಡಿ ನೀರು ಹರಿದು ಹೋಗಿದ್ದು ಅವರನ್ನು ಚಿಂತಾಕ್ರಾಂತರನ್ನಾಗಿಸಿದೆ. ಇನ್ನೊಂದೆಡೆ, 19ನೇ ಕ್ರಸ್ಟ್‌ಗೇಟ್‌ ಇದ್ದ ಸ್ಥಳದಲ್ಲಿ ಹೊಸ ಗೇಟ್‌ ಅಳವಡಿಸಲು ಎರಡು ಕಂಪನಿಗಳ 60ಕ್ಕೂ ಹೆಚ್ಚು ಕಾರ್ಮಿಕರು ಪ್ರತ್ಯೇಕ ಸ್ಥಳಗಳಲ್ಲಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ತುಂಗಭದ್ರಾ ಅಚ್ಚಕಟ್ಟು ಪ್ರದೇಶದಲ್ಲಿನ ಸದ್ಯದ ಚಿತ್ರಣ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT