ಬೆಂಗಳೂರು: ‘ರಾಜ್ಯಕ್ಕೆ ದ್ವಿಭಾಷಾ ಸೂತ್ರ ಇರಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಇದನ್ನೇ ಸರ್ಕಾರದ ಅಭಿಪ್ರಾಯವನ್ನಾಗಿ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜನ ಪ್ರಕಾಶನ ಆಯೋಜಿಸಿದ್ದ ಬರಗೂರು ರಾಮಚಂದ್ರಪ್ಪ ಸಂಪಾದಕತ್ವದ ‘ಕುವೆಂಪು ವಿಚಾರ ಕ್ರಾಂತಿ’ ಕೃತಿ ಜನಾರ್ಪಣೆ, ‘ಜನರ ಕಡೆಗೆ ವೈಚಾರಿಕ ನಡಿಗೆ’ ಮೂಲಕ ಕುವೆಂಪು ವಿಚಾರಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಆರಂಭದಲ್ಲಿ ಮಾತನಾಡಿ, ‘ಕುವೆಂಪು ಅವರು ದ್ವಿಭಾಷಾ ಸೂತ್ರ ರಾಜ್ಯದಲ್ಲಿರಬೇಕು ಎಂದು ಪ್ರತಿಪಾದಿಸಿದ್ದರು. ಅದು ಸರಿಯಾದುದು’ ಎಂದು ಹೇಳಿದ್ದರು.

ಇದೇ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿ, ‘ಸಚಿವ ಸಂಪುಟವನ್ನು ಒಪ್ಪಿಸಿ ದ್ವಿಭಾಷಾ ಸೂತ್ರ ತರಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಕುಂಕುಮ ಏಕೆ: ‘ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

‘ನಾನು ದೇವಸ್ಥಾನಕ್ಕೆ ಹೋದಾಗ ಕುಂಕುಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕಥೆ ಕಟ್ಟುತ್ತಾರೆ. ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕಥೆ ಕಟ್ಟುತ್ತಾರೆ. ಅದನ್ನು ಜನರೂ ನಂಬುವುದರಿಂದ ಇವನಿಗೆ ಎಷ್ಟು ಅಹಂಕಾರ. ವೋಟು ಹಾಕುವುದು ಬೇಡ ಎಂದು ನಿರ್ಧರಿಸುತ್ತಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.