ಕುಶಾಲನಗರ: ಪ್ರಸಿದ್ಧ ಪ್ರವಾಸಿ ತಾಣ ಕೊಡಗಿನ ದುಬಾರೆಯಲ್ಲಿರುವ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಗೋಣಿಕೊಪ್ಪ ಬಳಿಯ ಕಳತ್ಮಾಡುವಿನ ಲಯನ್ಸ್ ಶಾಲೆಯ ಶ್ರೇಯಸ್ (14), ನಳಿನ್ (14) ಮೃತ ವಿದ್ಯಾರ್ಥಿಗಳು.

ಸ್ಕೌಟ್ಸ್ & ಗೈಡ್ಸ್ ತಂಡದ 39 ವಿದ್ಯಾರ್ಥಿಗಳು ಪಿಕ್‌ನಿಕ್‌ಗೆಂದು ದುಬಾರೆಗೆ ಆಗಮಿಸಿದಾಗ ದುರ್ಘಟನೆ ನಡೆದಿದೆ. ನೀರಿಗೆ ಇಳಿದಾಗ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ.

ಡಿಸೆಂಬರ್ ಒಳಗೇ ಪಠ್ಯೇತರ ಚಟುವಟಿಕೆ ಪೂರ್ಣಗೊಳಿಸಬೇಕು. ದುಬಾರೆಗೆ ತೆರಳಲು ಯಾವುದೇ ಅನುಮತಿ ಪಡೆದಿಲ್ಲ. ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ಹಾಗೂ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾದೋ ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.