ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡಾನ್: ವಿಮಾನ ನಿಲ್ದಾಣ ರಾಜ್ಯಕ್ಕೆ ವಹಿಸಲು ಪ್ರಸ್ತಾವ: ವಿ. ಸೋಮಣ್ಣ

Last Updated 12 ಅಕ್ಟೋಬರ್ 2022, 16:20 IST
ಅಕ್ಷರ ಗಾತ್ರ

ಬೆಂಗಳೂರು: ‘ಉಡಾನ್’ ಯೋಜನೆಯಡಿ ನಿರ್ಮಿಸಿರುವ ನೂತನ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಮೈಸೂರು, ಕಲಬುರಗಿ ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಮಾಡುತ್ತಿದ್ದು, ರಾಯಚೂರು, ಬೀದರ್, ಶಿವಮೊಗ್ಗ ವಿಮಾನ ನಿಲ್ದಾಣಗಳು ಸದ್ಯದಲ್ಲೇ ಕಾರ್ಯಾರಂಭ ಮಾಡಲಿವೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಜೊತೆ ವಿವಿಧ ರಾಜ್ಯಗಳ ಮೂಲಸೌಕರ್ಯ ಅಭಿವೃದ್ಧಿ ಸಚಿವರ ಸಭೆ ದೆಹಲಿಯಲ್ಲಿ ಮುಂದಿನ ವಾರ ನಡೆಯಲಿದೆ. ವಿಮಾನ ನಿಲ್ದಾಣಗಳ ಉಸ್ತುವಾರಿಯನ್ನು ರಾಜ್ಯಕ್ಕೆ ವಹಿಸಿಕೊಡುವಂತೆ ಈ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು’ ಎಂದರು.

‘ಹೊಸ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತನ್ನ ಪಾಲಿನ ನೆರವು ಒದಗಿಸಿದರೆ ರಾಜ್ಯ ಸರ್ಕಾರವೇ ನಿರ್ವಹಣೆ ಮಾಡಲಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೂ ಆದಾಯ ಬರಲಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಕೊಡುವ ಉದ್ದೇಶದಿಂದ ಮಿನಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಭಾಗದಲ್ಲಿ ಅಧ್ಯಯನ ನಡೆಸಿ ಕ್ರಿಯಾ ಯೋಜನೆ ರೂಪಿಸಲು ಈಗಾಗಲೇ ಸೂಚನೆ ನೀಡಲಾಗಿದೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT