ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ

ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಬ್ಯಾರೇಜ್‌ ಮುಳುಗಡೆ
Last Updated 17 ಜೂನ್ 2020, 20:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಬಿರುಸಾಗಿದೆ. ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಹಳ್ಳದಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿಹೋಗಿದ್ದಾರೆ.

ಬೈಂದೂರಿನ ಕಾಲ್ತೋಡು ಗ್ರಾಮದ ಬೊಳ್ಳಂಬಳ್ಳಿ ಬಣಗೇರಿಯ ಕೊಡ್ಲ ಹಳ್ಳದಲ್ಲಿ ಬುಧವಾರ ಕಾಲುಜಾರಿ ಬಿದ್ದು ಗೋಪು ಸುಕ್ರನಾಯ್ಕ (58) ಎಂಬುವರು ಕೊಚ್ಚಿ ಹೋಗಿದ್ದಾರೆ. ಅವರ ಪತ್ತೆಗೆ ಶೋಧ ನಡೆಯುತ್ತಿದೆ.

24 ಗಂಟೆಗಳ ಅವಧಿಯಲ್ಲಿ ಮಂಗಳೂರು ನಗರದ ವ್ಯಾಪ್ತಿಯಲ್ಲಿ 11.6 ಸೆಂ.ಮೀ. ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 6.78 ಸೆಂ.ಮೀ. ಮಳೆ ಬಿದ್ದಿದೆ.

ಬೈಂದೂರು,ಮಲ್ಪೆ,ಕಾಪುಭಾಗದಲ್ಲಿಸಮುದ್ರಪ್ರಕ್ಷುಬ್ಧಗೊಂಡಿದ್ದುಅಲೆಗಳಉಬ್ಬರಹೆಚ್ಚಾಗಿದೆ. ಮಳೆ ಬಿರುಸಾಗುತ್ತಿದ್ದಂತೆ ಬ್ರಹ್ಮಾವರ ತಾಲ್ಲೂಕಿನಲ್ಲಿ ಭತ್ತದ ನಾಟಿ ಕಾರ್ಯವೂ ಚುರುಕಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.

ಒಳಹರಿವು ಹೆಚ್ಚಳ: ದಕ್ಷಿಣ ಮಹಾರಾಷ್ಟ್ರದ ಕೊಂಕಣ ಪ್ರದೇಶ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆಯ ಅಬ್ಬರ ಜೋರಾಗಿದ್ದು, ಕೃಷ್ಣಾ ಮತ್ತು ಉಪನದಿಗಳ ನೀರಿನ ಒಳಹರಿವು ಹೆಚ್ಚಳವಾಗಿದೆ. ಚಿಕ್ಕೋಡಿ ತಾಲ್ಲೂಕಿನ ಒಂದು, ನಿಪ್ಪಾಣಿ ತಾಲ್ಲೂಕಿನ 3 ಬ್ಯಾರೇಜ್‌ಗಳು ಮುಳುಗಡೆಯಾಗಿವೆ.

ಕೃಷ್ಣಾ ನದಿಗೆ 15 ಸಾವಿರ ಕ್ಯುಸೆಕ್ ಮತ್ತು ದೂಧಗಂಗಾ ಮತ್ತು ವೇದಗಂಗಾ ನದಿಗೆ 11 ಸಾವಿರ ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ‌ ಕೃಷ್ಣಾ ನದಿಗೆ 26 ಸಾವಿರ ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ- ದತ್ತವಾಡ ಮತ್ತು ನಿಪ್ಪಾಣಿ ತಾಲ್ಲೂಕಿನ ಕಾರದಗಾ- ಭೋಜ ಗ್ರಾಮಗಳ ಮಧ್ಯೆದ ದೂಧಗಂಗಾ ನದಿಗೆ ನಿರ್ಮಿಸಲಾಗಿರುವ ಮತ್ತುವೇದಗಂಗಾ ನದಿಗೆ ಅಡ್ಡಲಾಗಿರುವ ನಿರ್ಮಿಸಿರುವ ಬೋಜವಾಡಿ-ಕುನ್ನೂರ, ಅಕ್ಕೋಳ- ಸಿದ್ನಾಳ ಗ್ರಾಮಗಳ ಬ್ಯಾರೇಜ್‌ಗಳು ಮುಳುಗಡೆಯಾಗಿವೆ.

ಭಾರಿ ಮಳೆ: ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ.ಶಿರಸಿಯಲ್ಲೂ ಬೆಳಿಗ್ಗೆಯಿಂದಲೇ ಜೋರಾಗಿ ಮಳೆಯಾಯಿತು.ಶಿರಸಿ– ಯಲ್ಲಾಪುರ ರಸ್ತೆಯ ಯಲ್ಲಾಪುರ ನಾಕಾ ಸಮೀಪ ರಸ್ತೆಯ ಮೇಲೆ ನೀರು ನಿಂತಿತ್ತು.

ಜಿಲ್ಲೆಯ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿದೆ.ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ 8ರಿಂದ ಬುಧವಾರ ಬೆಳಿಗ್ಗೆ 8ರ ಅವಧಿಯಲ್ಲಿ ಅಂಕೋಲಾದಲ್ಲಿ 16 ಸೆಂ.ಮೀ, ಕಾರವಾರದಲ್ಲಿ 14.4, ಹೊನ್ನಾವರದಲ್ಲಿ 12.2 ಸೆಂ.ಮೀಹಾಗೂ ಭಟ್ಕಳದಲ್ಲಿ 11.8 ಸೆಂ.ಮೀ ಮಳೆಯಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.ಹಾಸನ, ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.

ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರವೂ ಉತ್ತಮ ಮಳೆ ಸುರಿಯಿತು.ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT