ಉಡುಪಿ: ಉಡುಪಿ –ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಮುಖಂಡ ಸುಧೀರ್ ಕುಮಾರ್ ಮರೋಳಿ ಟಿಕೆಟ್‌ಗೆ ಪೈಪೋಟಿ ನಡೆಸುತ್ತಿರುವ ಮಧ್ಯೆಯೇ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡರ ಹೆಸರು ಸಹ ಸೇರ್ಪಡೆಯಾಗಿದೆ.

ಉಡುಪಿ–ಚಿಕ್ಕಮಗಳೂರು ಅಥವಾ ಮೈಸೂರು–ಕೊಡಗು ಕ್ಷೇತ್ರದಿಂದ ಸದಾನಂದ ಗೌಡರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಸದಾನಂದ ಗೌಡರು ಉಡುಪಿ–ಚಿಕ್ಕಮಗಳೂರು ಕ್ಷೇತ್ರಕ್ಕೆ ಹೊಸಬರಲ್ಲ. 2009ರ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 2011ರಲ್ಲಿ ರಾಜ್ಯದ ಮುಖ್ಯಮಂತ್ರಿ ಹುದ್ದೆಗೇರುವ ಅವಕಾಶ ಬಂದಾಗ ರಾಜೀನಾಮೆ ನೀಡಿದ್ದರು.

ಕೋಟ ಪ್ರಚಾರ ಶುರು: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕೋಟ ಶ್ರೀನಿವಾಸ ಪೂಜಾರಿ ಚುನಾವಣಾ ಪ್ರಚಾರ ಆರಂಭಿಸಿದ್ದು ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಲವು ಬಿಜೆಪಿ ಮುಖಂಡರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.

ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್ ನಿವಾಸಕ್ಕೆ ಭೇಟಿನೀಡಿದ ಕೋಟ ಬೆಂಬಲ ಕೋರಿದರು. ಈ ಸಂದರ್ಭ ಪ್ರಮೋದ್ ಮಧ್ವರಾಜ್ ಕೋಟ ಅವರಿಗೆ ಶಾಲು ಹೊದಿಸಿ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.