ಉಡುಪಿ: ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಡಿಸೇಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಯಶ್ಪಾಲ್ ಸುವರ್ಣ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವರಾದ ರಾಜೀವ್ ರಂಜನ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು.

ಮಧ್ಯ ಪ್ರಾಚ್ಯ ದೇಶಗಳ ಯುದ್ಧದ ಪರಿಣಾಮದಿಂದ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯಗೊಂಡು ಮೀನುಗಾರಿಕಾ ಬೋಟ್ಗಳಿಗೆ ಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಿದೆ ಎಂದು ಸಚಿವರಿಗೆ ತಿಳಿಸಿದರು.

ಡೀಸೇಲ್ ಕೊರತೆಯಿಂದ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಲ್ಲಿ ಮೀನುಗಾರರು ಸೇರಿದಂತೆ ಮೀನುಗಾರಿಕೆಯನ್ನೇ ಪರೋಕ್ಷವಾಗಿ ಅವಲಂಬಿಸಿರುವ ಲಕ್ಷಾಂತರ ಮಂದಿಯ ಜೀವನೋಪಾಯಕ್ಕೆ ಸಮಸ್ಯೆಯಾಗಲಿದೆ ಎಂದು ಮಾಹಿತಿ ನೀಡಿದರು.

ಮನವಿಗೆ ಸ್ಪಂದಿಸಿದ ಸಚಿವರು ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕಾ ವಲಯಕ್ಕೆ ಅಗತ್ಯವಾದ ಡಿಸೇಲ್ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-1215018531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.