ಎಂ.ಫಿಲ್ ಪರಿಗಣನೆಗೆ ನಕಾರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007–08ಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್ ಆದವರಿಗೂ ಅವಕಾಶ ನೀಡಲಾಗಿತ್ತು. 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದವರು ಅರ್ಜಿ ಸಲ್ಲಿಸಿ, ನೇಮಕಾತಿ ಆದೇಶವನ್ನೂ ಪಡೆದಿದ್ದರು. ಆಗ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದವರು ಈಗ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ, 2009ಕ್ಕೂ ಮೊದಲು ಪಡೆದಿದ್ದ ಎಂ.ಫಿಲ್ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಕಾಲೇಜು ಶಿಕ್ಷಣ ಇಲಾಖೆ ನಿರಾಕರಿಸಿದೆ.