ಬೆಳಗಾವಿ (ಸುವರ್ಣ ವಿಧಾನಸೌಧ): ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ- 3ರ ಅನುಷ್ಠಾನಕ್ಕೆ ಹಿಂದೆ ಸ್ವಾಧೀನಪಡಿಸಿಕೊಂಡ ಜಮೀನುಗಳ ರೈತರಿಗೆ ಈವರೆಗೆ ಪರಿಹಾರ ನೀಡಿಲ್ಲ. ಸುಮಾರು 5 ಸಾವಿರ ಪ್ರಕರಣಗಳು ನ್ಯಾಯಾಲಯಗಳ ಮೆಟ್ಟಿಲೇರಿವೆ. ನ್ಯಾಯಾಲಯ ಪರಿಹಾರ ನೀಡುವಂತೆ ಆದೇಶ ಮಾಡಿದ್ದರೂ ನೀಡುತ್ತಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ವಿಧಾನಸಭೆಯಲ್ಲಿ ಯುಕೆಪಿ ವಿಷಯವನ್ನು ಯತ್ನಾಳ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ವಕೀಲರು ಹಾಗೂ ಅಧಿಕಾರಿಗಳು ಒಪ್ಪಂದ ಮಾಡಿಕೊಂಡು ಭೂ ಪರಿಹಾರ ನಿಗದಿ ಮಾಡಿಸಿದ್ದಾರೆ. ₹ 10 ಲಕ್ಷದ ಜಮೀನಿಗೆ ₹ 10 ಕೋಟಿ ಆದೇಶ ಮಾಡಿಸಿದರೆ ಕೊಡಲು ಸಾಧ್ಯವಿಲ್ಲ. ನಾನು ಇದನ್ನು ಒಪ್ಪುವುದಿಲ್ಲ. ನಾವು ರಾಜ್ಯದ ಹಿತ ಕಾಪಾಡಲು ಬದ್ಧ’ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯತ್ನಾಳ, ‘ನ್ಯಾಯಾಲಯದ ಆದೇಶ ಹಾಗೂ ರೈತರಿಗೆ ಅವಮಾನ ಮಾಡಿದ್ದೀರಿ. ಈ ಅವಮಾನ ಖಂಡಿಸಿ ಸಭಾತ್ಯಾಗ ಮಾಡುತ್ತಿದ್ದೇನೆ’ ಎಂದು ಹೇಳಿ ಸಭಾತ್ಯಾಗ ಮಾಡಿದರು.

‘ಯುಕೆಪಿ- 3ರ ಅನುಷ್ಠಾನಕ್ಕೆ 2013ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಬಿಜೆಪಿ ನಾಯಕರು ಒತ್ತಡ ಹೇರಿ ಯೋಜನೆಗೆ ಅನುಮತಿ ಕೊಡಿಸಿದರೆ ಸಾಲ ಮಾಡಿಯಾದರೂ ಯೋಜನೆ ಪೂರ್ಣಗೊಳಿಸಲು ಬದ್ಧವಾಗಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.

‘ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಎಲ್ಲಿಂದಾದರೂ ಹಣ ತಂದು ವೆಚ್ಚ ಮಾಡಲು ಯೋಜನೆ ರೂಪಿಸಿದ್ದೇವೆ. ವರ್ಷಕ್ಕೆ ಸುಮಾರು ₹ 20 ಸಾವಿರ ಕೋಟಿ ಬೇಕು. ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಆರಂಭಿಸಿದ್ದೇವೆ’ ಎಂದು ಹೇಳಿದರು.

ಈವರೆಗೆ ₹ 50,452 ಕೋಟಿ ವೆಚ್ಚ: ‘ಈ ಯೋಜನೆಗೆ 188 ಗ್ರಾಮಗಳ 75,563 ಎಕರೆ ಜಮೀನು ಮುಳುಗಡೆಯಾಗುತ್ತದೆ. ಈ ಪೈಕಿ 2,543 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ವಿತರಿಸಲಾಗಿರುತ್ತದೆ. ನವೆಂಬರ್ವರೆಗೆ ಭೂಸ್ವಾಧೀನ ಹಾಗೂ ಪುನರ್ ನಿರ್ಮಾಣ ವೆಚ್ಚ ಸೇರಿದಂತೆ ₹ 50,452 ಕೋಟಿ ವೆಚ್ಚ ಭರಿಸಲಾಗಿದೆ’ ಎಂದು ಶಿವಕುಮಾರ್ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.