ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶುಕ್ರವಾರ) ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಉಪಾಹಾರ ಸೇವಿಸಿದ ಬಳಿಕ ಬಿಜೆಪಿ ನಾಯಕರು ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದ್ದರು.

ಮಾರ್ಚ್ 25ರಿಂದ ಎರಡು ದಿನಗಳ ಕಾಲ ಬೆಂಗಳೂರು ಹಬ್ಬ ಆಯೋಜಿಸಲಾಗಿದೆ. ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 26ರಂದು ಅನಾವರಣಗೊಳಿಸಲಿದ್ದಾರೆ. ಬಳಿಕ ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದ್ದು, ರಾಜ್ಯ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.