ನವದೆಹಲಿ: ‘ಮಧ್ಯ ಕರ್ನಾಟಕದಲ್ಲೇ ಜನವರಿಯಿಂದ 111 ನವಜಾತ ಶಿಶುಗಳು ಮೃತಪಟ್ಟಿವೆ. ಸಿಸೇರಿಯನ್ ಆದ 27 ತಾಯಂದಿರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರೋಗ್ಯ ಇಲಾಖೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರ್ಲಕ್ಷ್ಯ, ದುರಹಂಕಾರದಿಂದ ತುಂಬಿ ತುಳುಕಿ ಇವತ್ತು ನಮ್ಮ ರಾಜ್ಯದ ಮಹಿಳೆಯರ ಮತ್ತು ಮಕ್ಕಳ ಸಾವಿಗೆ ಕಾರಣವಾಗುತ್ತಿದೆ’ ಎಂದರು.

ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೂ, ರಾಜ್ಯದಲ್ಲಿ ಸರಬರಾಜು ಆಗುತ್ತಿದೆ. ನಿಷೇಧಿತ ಔಷಧವನ್ನು ಮಹಿಳೆಯರಿಗೆ ನೀಡಲಾಗಿದೆ. ಪಶ್ಚಿಮ ಬಂಗಾ ಎಂಬ ಶೆಲ್ ಕಂಪನಿಯ ಮೂಲಕ ನಕಲಿ ಔಷಧ ಪೂರೈಕೆ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರವು ಕೊಲೆಗಡುಕ ಸರ್ಕಾರ ಆಗಿದೆ ಎಂದು ಅವರು ಕಿಡಿಕಾರಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

‘ಲೋಕಾಯುಕ್ತದವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಛೀಮಾರಿ ಹಾಕಿದ್ದಾರೆ. ಹಲವಾರು ತಜ್ಞರ ತಂಡಗಳು ಆಸ್ಪತ್ರೆಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ವರದಿ ಕೊಟ್ಟಿವೆ. ಆಸ್ಪತ್ರೆಗೆ ಹೋಗುವ ಸಾರ್ವಜನಿಕರು ಬದುಕಿ ವಾಪಸ್ ಬರುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಹಾಗೂ ಸಚಿವರ ದುಡ್ಡಿನ ಆಸೆಗೆ ಬಡವರು ಬಲಿಯಾಗುತ್ತಿದ್ದಾರೆ. ಕೇಂದ್ರ ಜನೌಷಧಿ ಕೇಂದ್ರಗಳನ್ನು ಮುಚ್ಚುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿಕೆ ನೀಡಿದ್ದಾರೆ. ಅವರು ದಂಧೆ ಮಾಡಲು ಹೊರಟಿದ್ದಾರೆ. ಇನ್ಯಾವುದೋ ಶೆಲ್ ಕಂಪನಿಗೆ ಟೆಂಡರ್ ಕೊಡಲು ಹೊರಟಿದ್ದಾರೆ’ ಎಂದು ಅವರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.