ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್ ವಿಮಾನ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಧರೆಗುರುಳಿದೆ.
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ನಾಯಕನಹಟ್ಟಿ ಸಮೀಪದ ಕುದಾಪುರ ವಾಯುನೆಲೆಯಿಂದ ಭಾನುವಾರ ಬೆಳಿಗ್ಗೆ ಹಾರಾಟ ಆರಂಭಿಸಿತ್ತು. ನಿಯಂತ್ರಣ ತಪ್ಪಿ ಜಮೀನಿಲ್ಲಿ ಪತನವಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಡ್ರೋನ್ ಮಾದರಿಯ ವಿಮಾನ ಪತನವಾದ ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ವಿಮಾನದ ಪಳಯುಳಿಕೆಗಳನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ. ಪೊಲೀಸರು ಹಾಗೂ ವಾಯುಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.