ಬೆಂಗಳೂರು: ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಇದೇ ಆಗಸ್ಟ್ನಿಂದ ತನ್ನ ಕ್ಯಾಂಪಸ್ ಆರಂಭಿಸಲಿದೆ.

ಈ ಕುರಿತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಸಮ್ಮುಖದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಒಪ್ಪಂದ ಮಾಡಿಕೊಂಡರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವದ್ವಯರು, ‘ಒಪ್ಪಂದದಂತೆ ವಿಶ್ವವಿದ್ಯಾಲಯ ಮೊದಲ ಹಂತದಲ್ಲಿ ವಾಣಿಜ್ಯ, ಪತ್ರಿಕೋದ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸ್ಗಳಲ್ಲಿ ಪದವಿ ಹಾಗೂ ಸೈಬರ್ ಭದ್ರತೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ. ಆಸ್ಟ್ರೇಲಿಯಾ ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಲಿಯೇ ಬೆಂಗಳೂರು ಕ್ಯಾಂಪಸ್ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ತನ್ನ ಪಠ್ಯಕ್ರಮವನ್ನೇ ಅನುಸರಿಸಲಿದೆ. ನಂತರ ಕ್ವಿನ್ಸಿಟಿಯಲ್ಲೂ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ’ ಎಂದರು.

‘ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಕೇಂದ್ರ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದೊಂದಿಗೆ ನಿಕಟ ಸಂಬಂಧ ಹೊಂದಿದೆ’ ಎಂದು ಎಂ.ಬಿ.ಪಾಟೀಲ ಹೇಳಿದರು.

‘ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರಿಗೆ ಆಸ್ಟ್ರೇಲಿಯಾದಲ್ಲಿ ಉತ್ತಮ ಉದ್ಯೋಗದ ಅವಕಾಶಗಳು ಸಿಗಲಿವೆ. ರಾಜ್ಯದ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ’ ಎಂದು ಸುಧಾಕರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.