ನವದೆಹಲಿ: ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು 2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹300 ಕೋಟಿಯಲ್ಲಿ ₹30 ಕೋಟಿಯಷ್ಟೇ ಬಳಕೆ ಯಾಗಿದೆ.

ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಔಷಧ ಲಭ್ಯವಿದ್ದರೂ ರೋಗಿಗಳಿಗೆ ಸಿಗುತ್ತಿಲ್ಲ. ಡಿಸೆಂಬರ್ ಅಂತ್ಯದ ವೇಳೆಗೆ, ಶೇ 80ರಷ್ಟು ಅನುದಾನ ಬಳಕೆಯೇ ಆಗಿಲ್ಲ ಎಂದು ಆರೋಗ್ಯ ಸಚಿವಾಲಯವೇ ಒಪ್ಪಿಕೊಂಡಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲಾಗಿದೆ. ಮಾರ್ಚ್ 31ಕ್ಕೆ ಆರ್ಥಿಕ ವರ್ಷ ಮುಗಿಯಲಿದ್ದು, ಅದರೊಳಗೆ ಅನುದಾನ ಬಳಕೆ ಮಾಡದಿದ್ದರೆ ವ್ಯರ್ಥ ಆಗಲಿದೆ.

ದೇಶದಲ್ಲಿ ಸುಮಾರು ಏಳು ಸಾವಿರ ವಿರಳ ಕಾಯಿಲೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶೇ 5ರಷ್ಟು ಕಾಯಿಲೆಗಳಿಗೆ ಮಾತ್ರ ನಿಖರ ಚಿಕಿತ್ಸೆಗಳಿದ್ದು, ಉಳಿದ ಶೇ 95ರಷ್ಟು ಕಾಯಿಲೆಗಳಿಗೆ ಜೀವನಪೂರ್ತಿ ಪೂರಕ ಚಿಕಿತ್ಸೆ ಒದಗಿಸಬೇಕಾಗಿದೆ.

ಹಿಮೋಫೀಲಿಯಾ, ತಲಸ್ಸೇಮಿಯಾ, ಪೊಂಪೆ, ಗೌಚರ್, ಸಿಕಲ್–ಸೆಲ್ ಅನೀಮಿಯಾ ಸೇರಿ ಹಲವು ರೋಗಗಳನ್ನು ವಿರಳ ಕಾಯಿಲೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕಾಯಿಲೆಗಳು ಆನುವಂಶಿಕವಾಗಿವೆ.

ಈ ರೋಗಗಳಿಂದ ಬಳಲುತ್ತಿರುವವರಿಗೆ ನೆರವಾಗಲು ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ–2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. ಆದರೆ, ಬಹುತೇಕ ಎಲ್ಲ ರೋಗಿಗಳ ಚಿಕಿತ್ಸಾ ವೆಚ್ಚವು ಅಲ್ಪಾವಧಿಯಲ್ಲಿಯೇ ಗೊತ್ತುಪಡಿಸಿದ ಮೊತ್ತವನ್ನು ಮೀರುತ್ತಿದೆ. ಇದರಿಂದಾಗಿ ರೋಗಿಗಳ ಕುಟುಂಬಗಳು ಚಿಕಿತ್ಸಾ ವೆಚ್ಚ ಭರಿಸ ಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ.

ಅಂಕಿ ಅಂಶಗಳು

₹300 ಕೋಟಿ

2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ಮೊತ್ತ

₹30.79 ಕೋಟಿ

ಡಿಸೆಂಬರ್ ಅಂತ್ಯದ ವರೆಗೆ ಖರ್ಚು ಮಾಡಿರುವ ಮೊತ್ತ

103 ಮಂದಿ

₹50 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಇಲ್ಲಿಯವರೆಗೆ ಪಡೆದವರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.