ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

39 ಹೆದ್ದಾರಿಗಳು ಮೇಲ್ದರ್ಜೆಗೆ: ಗಡ್ಕರಿಗೆ ಸಿದ್ದರಾಮಯ್ಯ ಮನವಿ

Published 28 ಜೂನ್ 2024, 15:36 IST
Last Updated 28 ಜೂನ್ 2024, 15:36 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಶುಕ್ರವಾರ ಇಲ್ಲಿ ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದರು. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ 5,225 ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ಮನವಿಯಲ್ಲಿ ಏನಿತ್ತು? 

*ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳ ಉನ್ನತೀಕರಣ.

* ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಸುರಂಗ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸುವುದು.

*ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ.

*ಮೈಸೂರು ರಿಂಗ್‌ ರಸ್ತೆಯಲ್ಲಿ 9 ಗ್ರೇಡ್‌ ಸಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ

*ಬೆಳಗಾವಿ ನಗರದಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ

* ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ

*ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ.

*ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ

* ಬೇಲೂರು– ಚಿಕ್ಕಮಗಳೂರು ನಡುವೆ ಚತುಷ್ಪಥ ನಿರ್ಮಾಣ.

• ರಾಷ್ಟ್ರೀಯ ಹೆದ್ದಾರಿ–766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವುದು.

•ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಎಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ, ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ- ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT