ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಳಕಲ್‌–ಕಾರವಾರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಗಡ್ಕರಿಗೆ ಮನವಿ

Published 3 ಜುಲೈ 2024, 15:38 IST
Last Updated 3 ಜುಲೈ 2024, 15:38 IST
ಅಕ್ಷರ ಗಾತ್ರ

ನವದೆಹಲಿ: ಇಳಕಲ್– ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. 

ನವದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿದ ಅವರು, ‘ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಭಾರಿ ಬದಲಾವಣೆಯಾಗಿದೆ. ಪ್ರಸ್ತುತ ಇಳಕಲ್– ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಬೇಕು. ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸಬೇಕು’ ಎಂದು ಕೋರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT