ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಶಾಸ್ತ್ರೀಯ ವರದಿ ಸ್ವೀಕರಿಸಲು ಉಪ್ಪಾರ ಮುಖಂಡರ ಒತ್ತಾಯ

Published 24 ಜುಲೈ 2023, 20:58 IST
Last Updated 24 ಜುಲೈ 2023, 20:58 IST
ಅಕ್ಷರ ಗಾತ್ರ

ಬೆಂಗಳೂರು: ಉಪ್ಪಾರ ಜನಾಂಗದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದ್ದು, ವರದಿ ಸ್ವೀಕಾರ ಮಾಡಿ ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಉಪ್ಪಾರ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಚಿತ್ರದುರ್ಗದ ಭಗೀರಥ ಮಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಉಪ್ಪಾರ ಸಮಾಜದ ಮುಖಂಡರ ನಿಯೋಗವು ಸೋಮವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಶಿಕ್ಷಣ ಸಂಸ್ಥೆಗೆ ಜಮೀನು ಮಂಜೂರು ಮಾಡುವುದು, ರಾಜಕೀಯ ಪ್ರಾತಿನಿಧ್ಯ, ಭಗೀರಥ ಗುರುಪೀಠದ ಆಶ್ರಯದಲ್ಲಿ ಮಧುರ ಕಣಿವೆ ಸಹಕಾರ ಸಾಮುದಾಯಿಕ ಬೇಸಾಯ ಸಂಘಕ್ಕೆ 500 ಎಕರೆ ಜಮೀನು ಗುತ್ತಿಗೆ ಅವಧಿ ಮುಗಿದಿದ್ದು, ಗುರುಪೀಠದ ಶಿಕ್ಷಣ ಸಂಸ್ಥೆಗಳ ಟ್ರಸ್ಟ್‌ ಹೆಸರಿಗೆ ಕಾಯಂ ಆಗಿ ಮಂಜೂರು ಮಾಡುವುದು ಸೇರಿ ಹಲವು ಬೇಡಿಕೆಗಳನ್ನು ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT