ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಸೋಮವಾರ ಕೇಳಿದ ಪ್ರಶ್ನೆಗೆ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ವನ ಸಂರಕ್ಷಣಾ ಅಧಿನಿಯಮ–1980ರಲ್ಲಿ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಒಪ್ಪಿಗೆ ನೀಡಿಲ್ಲ. ಈ ಯೋಜನೆಯ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿತ್ತು. ಯೋಜನೆಯ ಕಾರ್ಯಸಾಧ್ಯತೆ ಕುರಿತು ತಾಂತ್ರಿಕ/ಆರ್ಥಿಕ ಅಂಶಗಳ ಪರಿಶೀಲನೆಗೆ ಕೇಂದ್ರ ಜಲ ಆಯೋಗಕ್ಕೆ ಕಳುಹಿಸಲು 2024ರ ಫೆಬ್ರುವರಿ 2ರಂದು ತೀರ್ಮಾನಿಸಲಾಗಿತ್ತು. ಜಲ ಆಯೋಗ ಈ ವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.