ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಅಲ್ವಂತೆ: ಡಿಕೆ ಶಿವಕುಮಾರ್

Published 7 ಆಗಸ್ಟ್ 2023, 16:32 IST
Last Updated 7 ಆಗಸ್ಟ್ 2023, 16:32 IST
ಅಕ್ಷರ ಗಾತ್ರ

ಬೆಂಗಳೂರು: ‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಘೋಷಿಸಿದ್ದ ಕೇಂದ್ರ ಸರ್ಕಾರ, ಅದಕ್ಕಾಗಿ ₹ 5,300 ಕೋಟಿ ಅನುದಾನ ಮೀಸಲಿಟ್ಟಿತ್ತು. ಆದರೆ, ಈಗ ಅದು ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯೋಜನೆಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯಲ್ಲಿ ₹ 600 ಕೋಟಿ ಮಾತ್ರ ಇದೆ. ಆದರೆ, ₹1.25 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ’ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದ ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಯಾವುದೇ ರಾಷ್ಟ್ರೀಯ ಯೋಜನೆಗೆ ಕೊಡದೇ ಇದ್ದಷ್ಟು ಅನುದಾನವನ್ನು ಈ ಯೋಜನೆಗೆ ನೀಡಿದೆ’ ಎಂದಿದ್ದರು. ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಯೋಜನೆ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT