ಸುವರ್ಣ ವಿಧಾನಸೌಧ (ಬೆಳಗಾವಿ): ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಮೂರನೇ ಹಂತದಲ್ಲಿ ಮುಳುಗಡೆಯಾಗುವ ಜಮೀನನ್ನು ಒಂದೇ ಹಂತದಲ್ಲಿ ಸ್ವಾಧೀನ ಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಯುಕೆಪಿ ಮೂರನೇ ಹಂತದ ಯೋಜನೆಗೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಸೋಮವಾರ ಸಭೆ ನಡೆಯಿತು.

ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್ನಿಂದ 524.26 ಮೀಟರ್ಗೆ ಎತ್ತರಿಸುವ ಯೋಜನೆಗೆ ಮುಳುಗಡೆ ಆಗಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದೆ. 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.

ಜಲಾಶಯದ ಹಿನ್ನೀರಿನಿಂದ ಮುಳುಗಡೆ ಆಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ ಮುಳುಗಡೆಯಾಗುವ 73,020 ಎಕರೆ ಭೂಸ್ವಾಧೀನಕ್ಕೆ ಬಾಕಿಯಿದೆ. 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು.

ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗಸೂಚಿ ದರ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲಾಗುವುದು. ರೈತರಿಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯ ಆಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20 ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದೂ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು.

ವಿಜಯಪುರ, ಬಾಗಲಕೋಟೆ ಜಿಲ್ಲೆಯ ಹೋರಾಟಗಾರರು, ರೈತ ಮುಖಂಡರು ಸಭೆಯಲ್ಲಿ ಅಹವಾಲು ಮಂಡಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಆರ್.ಬಿ.ತಿಮ್ಮಾಪುರ, ಶಿವಾನಂದ ಪಾಟೀಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.